ವಾರಾಣಸಿಯಲ್ಲಿ ವೈದ್ಯರ ಮುಷ್ಕರ: ರೋಗಿಗಳ ಪರದಾಟ

Varanasi: Doctors Strike continues for second day

25-07-2019

ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ವಾರಾಣಸಿಯ ಸರ್ ಸುಂದರ್‍ಲಾಲ್ ಆಸ್ಪತ್ರೆಯ ವೈದ್ಯರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದೆ. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಅನ್ವಯಗೊಳಿಸುವಂತೆ ವೈದ್ಯರು ಒತ್ತಾಯಿಸಿ ಮುಷ್ಕರ ನಡೆಸುತ್ತಿದ್ದು, ಚಿಕಿತ್ಸೆ ಸಿಗದೆ ನಾಗರಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯರು, ವೈದ್ಯರು ಇಲ್ಲಿ ಇಲ್ಲ. ಯಾರೊಬ್ಬರೂ ನಮಗೆ ಮಾಹಿತಿ ನೀಡುತ್ತಿಲ್ಲ. ನಾವು ತೀರಾ ಅಸಹಾಯಕರಾಗಿದ್ದೇವೆ. ನಮಗೆ ಏನು ಮಾಡಬೇಕು ಎಂಬುದು ಕೂಡ ಗೊತ್ತಿಲ್ಲ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Sundarlal Hospital Doctors Strike Varanasi PM Modi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ