ಜನಸ್ನೇಹಿ ಕೇಂದ್ರಗಳ, ನೌಕರರ ಸೇವೆಯನ್ನು ಖಾಯಂಗೊಳಿಸಲು ಅವಕಾಶಗಳಿಲ್ಲ !

Kannada News

12-06-2017

ಬೆಂಗಳೂರು:- ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಹಾಗೂ ಫ್ರೆಂಟ್ ಆಫೀಸ್ ಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆಯನ್ನು ಖಾಯಂಗೊಳಿಸಲು ಹಾಗೂ ಸೇವಾ ಭದ್ರತೆ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿಧಾನಸಭೆಗೆ ತಿಳಿಸಿದರು.  ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕೇಂದ್ರಗಳಲ್ಲಿ 1148 ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದಾರೆ. ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ವಿತರಿಸುವ ವಿವಿಧ ಪ್ರಮಾಣ ಪತ್ರಗಳ ಸೇವೆಯ ಅರ್ಜಿ ಶುಲ್ಕದಿಂದ ಸಂಗ್ರಹವಾಗುವ ಹಣವು ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಯ, ಅಟಲ್ ಜೀ ಜನಸ್ನೇಹಿ ಕೇಂದ್ರದ ಯೋಜನೆಯ ಬಳಕೆದಾರರ ನಿಧಿಯಲ್ಲಿ ಜಮೆಯಾಗುತ್ತದೆ ಎಂದರು. ನಾಡ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಿರುವ ಡೇಟಾ ಎಂಟ್ರಿ ಆಪರೇಟರ್ ಗಳಿಗೆ ಪಾವತಿಸಬೇಕಾದ ಮಾಸಿಕ ಹಣವನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ