ವರಿಷ್ಠರ ಮನವೊಲಿಸಲು ರಾಜ್ಯ ನಾಯಕರ ಕಸರತ್ತು

BJP Leaders tries to convince BJP High command

25-07-2019

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಪತನದ ಬಳಿಕ ಸರ್ಕಾರ ರಚಿಸುವ ಉತ್ಸಾಹದಲ್ಲಿ ಇರುವ ಬಿಜೆಪಿ ನಾಯಕ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಬ್ರೇಕ್ ಹಾಕಿದ್ದು, ಸರ್ಕಾರ ರಚನೆಗೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಒತ್ತಡಕ್ಕೆ ಸಿಲುಕಿರುವ ಅವರು ವರಿಷ್ಠರ ಮನವೊಲಿಕೆಗೆ ಮುಂದಾಗಿದ್ದಾರೆ.
ಯಡಿಯೂರಪ್ಪ ಸಲಹೆ ಮೇರೆಗೆ ವರಿಷ್ಠ ರ ಜತೆ ಮಾತುಕತೆ ನಡೆಸಲು ದೆಹಲಿಗೆ ತೆರಳಿರುವ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ವಿಜಯೇಂದ್ರ ಮತ್ತು ಮಾಧುಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿದರು. ಈ ವೇಳೆ ಬಿಎಸ್ ಯಡಿಯೂರಪ್ಪನವರು ಈಗ ಸರ್ಕಾರ ರಚನೆಗೆ ಮುಂದಾದರೆ ಬಹುಮತ ಸಾಬೀತು ಪಡಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದಕ್ಕೆ ಕಾರಣವಾಗಲಿರುವ ಅಂಶಗಳನ್ನು ವಿವರಿಸಿದರು ಎನ್ನಲಾಗಿದೆ.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಹೈಕಮಾಂಡ್ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ನಾಳೆ ಸಂಸತ್ತಿನ ಅಧಿವೇಶನ ಪೂರ್ಣಗೊಳ್ಳಲಿರುವ ಕಾರಣ ಹಲವು ಮಸೂದೆಗಳು ಮಂಡನೆಯಾಗಬೇಕಿದೆ. ಹೀಗಾಗಿ ಸಂಜೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಶಾ ತಿಳಿಸಿದ್ದಾರೆ ಎಂದು ಶೆಟ್ಟರ್ ಹೇಳಿದರು.
ರಾಜ್ಯದ ರಾಜಕೀಯ ಬೆಳೆವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ನಾಯಕರು ನಮ್ಮ ಮಾಹಿತಿಯನ್ನು ಪಡೆದಿದ್ದಾರೆ. ಸಭೆಯಲ್ಲಿ ಜೆಪಿ ನಡ್ಡಾ ಅವರು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯದಲ್ಲಿ ಮುಂದಿನ ಅವಧಿಯಲ್ಲಿ ರಾಜ್ಯದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುವುದರ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

BJP Leaders BS Yediyurappa Amith Shah Madhuswamy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ