ಬಿಜೆಪಿಯಿಂದ ಸ್ಥಿರ ಸರ್ಕಾರ ಅಸಾಧ್ಯ: ಹೆಚ್ ಡಿ ಕೆ

HD Kumaraswamy Statement

25-07-2019

ಬಿಜೆಪಿಯಿಂದ ಸ್ಥಿರ ಸರ್ಕಾರ ಅಸಾಧ್ಯ: ಹೆಚ್ ಡಿ ಕೆ

ಬೆಂಗಳೂರು: ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಆಡಳಿತ ನೀಡಲು ಆಗುವುದಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಅಸಾಧ್ಯ ಎಂದು ಉಸ್ತುವಾರಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.

ಮಾಜಿ ಸಚಿವ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ಸುಮಾರು 1ಗಂಟೆಗಳ ಕಾಲ ಚರ್ಚೆ ನಡೆಸಿದ ಬಳಿಕ ಮಾಧ್ಯ ಮದ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಚಿವ ರಾಮಲಿಂಗರೆಡ್ಡಿ ಸಹ ರಾಜೀನಾಮೆ ನೀಡಿದ್ದರು. ರಾಜೀನಾಮೆ ವಾಪಸ್ ಪಡೆಯಲು ಮನವಿ ಮಾಡಿದ್ದದರು. ನಮ್ಮ ಮನವಿ ಬೆಲೆ ಕೊಟ್ಟು ರಾಜೀನಾಮೆ ವಾಪಸ್ ಪಡೆದರು ಎಂದು ಹೇಳಿದರು.

ಹಾಗೆಯೇ ರಾಮಲಿಂಗಾರೆಡ್ಡಿ ನಿಷ್ಠಾವಂತ ಕಾಂಗ್ರೆಸ್ಸಿಗರು, ನಾನು ಅವರ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಮಾತನಾಡಬೇಕಿತ್ತು. ಆದರೆ ಕಲಾಪದಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂದು ಖುದ್ದು ಅವರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಇದಕ್ಕು ಮುನ್ನ ಬಹುಮತ ಸಾಬೀತು ಮಾಡುವಲ್ಲಿ ವಿಫಲರಾಗಿ ಈಗಾಗಲೇ ಸಿಎಂ ಸ್ಥಾನಕ್ಕೆ ನೀಡಿ ಉಸ್ತುವಾರಿ ಸಿಎಂ ಆಗಿರುವ ಹೆಚ್.ಡಿ ಕುಮಾರಸ್ವಾಮಿ ಮಾಜಿ ಸಚಿವ ರಾಮಲಿಂಗರೆಡ್ಡಿರನ್ನ ಭೇಟಿಯಾಗಿ ಚರ್ಚೆ ನಡೆಸಿದರು. ನಗರದ ಲಕ್ಕಸಂದ್ರದಲ್ಲಿರುವ ರಾಮಲಿಂಗ ರೆಡ್ಡಿ ನಿವಾಸಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದ್ದರು. ಮನೆಗೆ ಬ್ರೇಕ್‍ಫಾಸ್ಟ್‍ಗೆ ಬರುವುದಾಗಿ ಫೋನ್ ಮಾಡಿ ಹೇಳಿ ಹೆಚ್.ಡಿ.ಕುಮಾರಸ್ವಾಮಿ ದಿಢೀರ್ ಭೇಟಿ ನೀಡಿದ್ದು, ಇದೀಗ ಉಭಯ ನಾಯಕರ ನಡುವಿನ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಸುಮಾರು 1 ಗಂಟೆಗಳಿಂದಲೂ ರಾಮಲಿಂಗರೆಡ್ಡಿ ಜತೆ ಹೆಚ್.ಡಿ ಕುಮಾರಸ್ವಾಮಿ ಚರ್ಚೆ ನಡೆಸಿದ್ದು,ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗ ಕಣ್ಣೀಟ್ಟಿರುವ ಅವರು ಮುಂದಿನ ರಾಜಕೀಯ ನಡೆ, ಕಾರ್ಯತಂತ್ರದ ಬಗ್ಗೆ ಸಮಾಲೋಚಿಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

HD Kumaraswamy JDS BJP Ramalingareddy


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ