ಕರಾವಳಿ - ಮಲೆನಾಡಿನಲ್ಲಿ ವರುಣಾರ್ಭಟ

Heavy Rain in Costal Karnataka

26-07-2019

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ,ಮಂಗಳೂರು ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿ ಭಾಗದ ಕುಮಟ ತಾಲೂಕಿನ ಕೂಜಳ್ಳಿ, ಕೋನಳ್ಳಿ ಗ್ರಾಮ ಬಹುತೇಕ ಜಲಾವೃತವಾಗಿದ್ದು, ಕುಮಟ ತಾಲೂಕಿನ ಬಡಗಣಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ತಲಕಾವೇರಿ ಭಾಗಮಂಡಲದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾದ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿದೆ. ಈ 24 ಗಂಟೆಯಲ್ಲಿ 135 ಮಿಲಿ ಮೀಟರ್ ಮಳೆ ಬಿದ್ದಿದೆ. ಕುಂದಾಪುರ ತಾಲೂಕಲ್ಲಿ ಅತೀ ಹೆಚ್ಚು 155 ಮಿಲಿಮೀಟರ್ ಮಳೆಯಾಗಿದೆ.

ಹವಾಮಾನ ಇಲಾಖೆ ಇನ್ನೂ ಎರಡು ದಿನ ಕರಾವಳಿ ಮಲೆನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದೆ ಹೀಗಾಗಿ ವಿಕೋಪ ನಿರ್ವಹಣೆಗೆ ಈ ಎಲ್ಲಾ ಪ್ರದೇಶದಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯಲ್ಲಿ ಸಜ್ಜಾಗಿದೆ.


ಸಂಬಂಧಿತ ಟ್ಯಾಗ್ಗಳು

Costal Karnataka Flood Heavy Rain Kodagu


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ