ಇಂದು ಸಂಜೆ 6 ಗಂಟೆಗೆ ಬಿಎಸ್ ವೈ ಪ್ರಮಾಣವಚನ

BSY will take oath as Karnataka CM today evening

26-07-2019

ಬೆಂಗಳೂರು: ಹಠಾತ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಸರ್ಕಾರ ರಚನೆ ಮಾಡಲು ಅನುಮತಿ ನೀಡಿದ್ದಾರೆ. ಇಂದು ಸಂಜೆ 6 ರಿಂದ 6.15ರೊಳಗೆ ವೇಳೆಗೆ ಪ್ರಮಾಣ ವಚನ ಸ್ವೀಕಾರ ಮಾಡಲು ರಾಜ್ಯಪಾಲರು ಅವಕಾಶ ನೀಡಿದ್ದಾರೆ.

ರಾಜಭವನದಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಬಿಎಸ್‍ವೈ ಪ್ರಮಾಣ ಸ್ವೀಕಾರ ಮಾಡಲಿದ್ದು, ಏಕಾಂಗಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಈ ಮೂಲಕ ಬಿಎಸ್‍ವೈ ಅವರು 4ನೇ ಬಾರಿಗೆ ಸಿಎಂ ಆಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ.

ಯಡಿಯೂರಪ್ಪ ಇಂದು ಬೆಳಿಗ್ಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಮಾಡಲು ಹಕ್ಕು ಪ್ರತಿಪಾದನೆ ಮಾಡಿದರು.ಈ ವೇಳೆ ಸರ್ಕಾರ ರಚನೆಗೆ ಅನುಮತಿ ನೀಡಿದ ರಾಜ್ಯಪಾಲರು ‌ಜುಲೈ 31ರೊಳಗೆ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದರು.

ರಾಜ್ಯಪಾಲರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಸಮಯ ಕೇಳಿದ್ದು 6 ರಿಂದ 6.30 ರ ಒಳಗೆ ಪ್ರಮಾಣ ವಚನ ಸ್ವೀಕರಿಸಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇಂದು ನಾನು ಮತ್ತು ನನ್ನ ಜತೆ ಇನ್ನೂ ಯಾರ್ಯಾರು ಪ್ರಮಾಣ ವಚನ ಸ್ಬೀಕಾರ ಮಾಡಬೇಕೆಂದು ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ. ಸಮಾರಂಭಕ್ಕೆ ಬರುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಎಲ್ಲ ಶಾಸಕರು ಹಾಗೂ ಹಂಗಾಮಿ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡುತ್ತೇನೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

BS Yediyurappa Karnataka CM Oath Vajubhai Vala


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ