ಬಿಎಸ್ವೈ ಸರ್ಕಾರ ರಚನೆಗೆ ಕಾಂಗ್ರೆಸ್, ಜೆಡಿಎಸ್ ವಿರೋಧ

Karnataka Crisis

26-07-2019

ಬೆಂಗಳೂರು: ಇವತ್ತು, ಬಿಜೆಪಿಗೆ ಸಂಖ್ಯಾಬಲ ಇಲ್ಲದ ಕಾರಣ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನವಾಗಿ ಸ್ವೀಕರಿಸಲು ಸಾಧ್ಯವೇ ಇಲ್ಲ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ. @BJP4Karnataka ಮತ್ತು @BSYBJPಗೆ ಟ್ಯಾಗ್ ಮಾಡಿರುವ ಕೆಪಿಸಿಸಿ, ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಾಗೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ ಎಂದು ಹೇಳಿದೆ. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿಗೆ ಸರ್ಕಾರ ರಚಿಸಲು ಹಕ್ಕಿಲ್ಲ ಎಂದಿದೆ.

ಇನ್ನು ಜೆಡಿಎಸ್ ಕೂಡ ಇದೇ ಮಾರ್ಗವನ್ನು ಅನುಸರಿಸಿದ್ದು, ವಿಧಾನಸಭೆಯ ಸಂಖ್ಯಾಬಲ 222, ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲ 112. ಆದರೆ @BSYBJPರವರು ನನಗೆ 105 ಶಾಸಕರ ಬೆಂಬಲವಿದೆ ಎಂದು‌ ಸರ್ಕಾರ ರಚನಗೆ ಹಕ್ಕು ಮಂಡಿಸಿದ್ದು ಇದಕ್ಕೆ ರಾಜ್ಯಪಾಲರು ಬಹುಮತದ ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಹೇಳಿದೆ.


ಸಂಬಂಧಿತ ಟ್ಯಾಗ್ಗಳು

JDS BS Yediyurappa Congress BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ