‘ಬಹುಮತ ಸಾಬೀತುಪಡಿಸಿದ ತಕ್ಷಣ ರಾಜೀನಾಮೆ’

Aravind Malagatti Statement

26-07-2019

ಬೆಂಗಳೂರು: ಹೊಸ ಸರ್ಕಾರ ತನ್ನ ಬಹುಮತ ಮಾಡಿದ ತಕ್ಷಣವೇ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಅವರು ಘೋಷಿಸಿದ್ದಾರೆ.

'ಅವಧಿ' ಆನ್ಲೈನ್ ಸಾಹಿತ್ಯ ಪತ್ರಿಕೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಹೊಸ ಸರ್ಕಾರ ಬಂದ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ನಿರ್ಬಂಧವೇನೂ ಇಲ್ಲ. ಬರಗೂರು ರಾಮಚಂದ್ರಪ್ಪನವರ ನೇತೃತ್ವದ ಸಮಿತಿ ನೀಡಿದ ಶಿಫಾರಸು ಕೂಡ ಯಾವುದೇ ಅಧ್ಯಕ್ಷರು 3 ವರ್ಷದ ತಮ್ಮ ಅವಧಿ ಸಂಪೂರ್ಣಗೊಳಿಸುವ ಬಗ್ಗೆ ಒತ್ತು ನೀಡಿದೆ. ಆದರೆ ನಾನು ನೈತಿಕತೆಯ ಪ್ರಶ್ನೆಯನ್ನಿಟ್ಟಿಕೊಂಡು ರಾಜೀನಾಮೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Aravind Malagatti Author Kannada Literature Karnataka Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ