ನಿಯೋಜಿತ ಸಿಎಂ ಮೊದಲ ಆದೇಶವೇನು ಗೊತ್ತ?

BS Yediyurappa

26-07-2019

ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರು ನಿಯೋಜಿತ ಸಿಎಂ ಆದ ತಕ್ಷಣ ಹಿಂದಿನ ಸರ್ಕಾರ ಹೊರಡಿಸಿರುವ ಕೆಲವು ಆದೇಶಗಳಿಗೆ ತಡೆ ನೀಡಿದ್ದಾರೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದ ಪ್ರತಿಯಲ್ಲಿ, ಮಾನ್ಯ ನಿಯೋಜಿತ ಮುಖ್ಯಮಂತ್ರಿಗಳು ಜುಲೈ-2019ರ ಮಾಹೆಯಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಹೊಸ ಕಾಮಗಾರಿಗಳಿಗೆ ಸಂಬಂಧಿತ ಆದೇಶಗಳನ್ನು ತಕ್ಷಣವೇ ಮುಂದಿನ ಪರಿಶೀಲನೆ ಆಗುವವರೆಗೆ ತಡೆ ಹಿಡಿಯುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲು ಸೂಚಿಸಿರುತ್ತಾರೆ.

ಮಾನ್ಯ ನಿಯೋಜನೆ ಮುಖ್ಯಮಂತ್ರಿಗಳು ಜುಲೈ-219ರ ಮಾಹೆಯಲ್ಲಿ ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವಗಳ ಮೇಲೆ ಅನುಮೋದನೆಗೊಂಡು, ಜಾರಿಯಾಗದೇ ಇರುವ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿ ಮಾಡದಂತೆ ಹಾಗೂ ಈಗಾಗಲೇ ಹೊರಡಿಸಿರುವ, ಆದರೆ ಚಾಲನೆಗೊಳ್ಳದಿರುವ ವರ್ಗಾವಣೆ ಸಂಬಂಧಿತ ಪ್ರಸ್ತಾವಗಳ ಮೇಲಿನ ಆದೇಶಗಳನ್ನು ಮುಂದಿನ ಆದೇಶದವರೆಗೆ ಚಾಲನೆಗೊಳಿಸದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲು ಸೂಚಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಮಾನ್ಯ ನಿಯೋಜಿತ ಮುಖ್ಯಮಂತ್ರಿಗಳ ನಿರ್ದೇಶನಗಳನ್ನು ಪಾಲಿಸಲು ಕೋರಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪತ್ರವನ್ನು ಸರ್ಕಾರದ ಎಲ್ಲ ಇಲಾಖೆಗಳ ಅಪರ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿಗಳಿಗೆ ರವಾನಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

BS Yediyurappa Karnataka Crisis Vajubhai Vala T M Vijayabhaskar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ