72 ಗಂಟೆಗಳಲ್ಲಿ 9 ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್ !

Kannada News

12-06-2017 200

ಕಾಶ್ಮೀರ:- ಜಮ್ಮು-ಕಾಶ್ಮೀರದ ಕೃಷ್ಣ ಘಾಟಿ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಇಂದು ಬೆಳಗ್ಗೆ 6.20ಕ್ಕೆ ಪಾಕಿಸ್ತಾನ ಸೇನೆ ಸಣ್ಣ ಶಸ್ತ್ರಾಸ್ತ್ರ, ಆಟೋಮ್ಯಾಟಿಕ್ಸ್ ಮತ್ತು ಮೊಟಾರ್ಸ್ ಗಳ ಮನಸೋ ಇಚ್ಛೆ ಗುಂಡಿನ ದಾಳಿಯನ್ನು ನಡೆಸಿತು. ಪಾಕ್ ಕಳೆದ 72 ಗಂಟೆಗಳಲ್ಲಿ 9 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತೀಯ ಸೇನೆ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರತೀಕಾರ ನೀಡುತ್ತಿದೆ. ನಿನ್ನೆ ಪಾಕಿಸ್ತಾನ ಸೇನೆ ಜಮ್ಮು-ಕಾಶ್ಮೀರದ ನೌಶೆರ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು. ಇಲ್ಲಿ ಕೂಡ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ಗುಂಡಿನ ದಾಳಿ ಆರಂಭಿಸಿತ್ತು. ನಿನ್ನೆ ಮಧ್ಯಾಹ್ನ 12.40ಕ್ಕೆ ಪಾಕಿಸ್ತಾನ ಸೇನೆ ಗುಂಡಿನ ದಾಳಿ ಆರಂಭಿಸಿದಾಗ  ಭಾರತೀಯ ಸೇನೆ ಪ್ರತ್ಯುತ್ತರ ನೀಡಲಾರಂಭಿಸಿತು. ಇದರಿಂದಾಗಿ ಸುಮಾರು 45 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಯಿತು. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ