ಕೃಷ್ಣ ಭೈರೇಗೌಡ ಬಗ್ಗೆ ಸೋಮಶೇಖರ್ ಹೇಳಿದ್ದೇನು ಗೊತ್ತ?

S T Somashekar Statement

29-07-2019

ಬೆಂಗಳೂರು: ಮೈತ್ರಿ ಸರ್ಕಾರ ಪತನವಾಗಬೇಕೆಂಬುದು ಕಾಂಗ್ರೆಸ್ ಪಕ್ಷದ ಬಹುತೇಕ ‌ನಾಯಕರ ಇಚ್ಚೆಯಾಗಿತ್ತು. ಆ ನಾಯಕರೇ ವಿಧಾನಸಭೆಯಲ್ಲಿ ಸರ್ಕಾರ ಉಳಿಸುವ ಪ್ರಯತ್ನ ಮಾಡುವ ಗೋಸುಂಬೆತನ ತೋರಿಸಿದ್ದಾರೆ. ನಾನು ಸದ್ಯದಲ್ಲೇ ಕ್ಷೇತ್ರದ ಜನರ ಸಭೆ ಕರೆದು ಚರ್ಚಿಸಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಅನರ್ಹಗೊಂಡ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಮುಂಬೈ ನಿಂದ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್, ಜೆಡಿಎಸ್ ನಾಯಕರು ಹಾಗೂ ವಿಧಾನಸಭಾದ್ಯಕ್ಷ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷದ ಋಣ ತೀರಿಸುವ ಸಲುವಾಗಿ ಸ್ಪೀಕರ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಇದನ್ನು ನಾವು ಮೊದಲೇ ಊಹೆ ಮಾಡಿದ್ದೆವು. ಹೀಗಾಗಿಯೇ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೆವು. ಇದೀಗ ನಾವು ಮತ್ತೆ ಕಾನೂನು ಹೋರಾಟ ಮಾಡುತ್ತೇವೆ ಎಂದರು.
ನಂಬಿಕೆ ದ್ರೋಹಕ್ಕೆ ಮತ್ತೊಂದು ‌ಹೆಸರು ಕೃಷ್ಣಭೈರೇಗೌಡ. ಅವರು ಸದನದಲ್ಲಿ ನಮ್ಮ ಬಗ್ಗೆ ಮಾತನಾಡಿರುವುದನ್ನು ಗಮನಿಸಿದ್ದೇವೆ. ಕೃಷ್ಣ ಭೈರೇಗೌಡ ಸಾಚಾ ಅಲ್ಲ. ಜೆಡಿ ಎಸ್ ಗೆ ಬೆನ್ನಿಗೆ‌ ಚೂರಿ‌ಹಾಕಿ ಕಾಂಗ್ರೆಸ್ ಗೆ ಬಂದಿದ್ದ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ದೇವೇಗೌಡ ರ ಮಾತಿನಂತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾನೆ ಹೊರತು ಅವನ ಸೋಲಿಗೆ ನಾವು ಕಾರಣವಲ್ಲ ನಮ್ಮನ್ನು ಬೆದರಿಸುವ ಕೆಲಸವನ್ನು ಕೆಲವು ಕಾಂಗ್ರೆಸ್ ನಾಯಕರು ಮಾಡಿದ್ದಾರೆ ವಿಧಾನಸಭೆಯಲ್ಲಿ ರಣಧೀರರಂತೆ ಮಾತನಾಡಿದ್ದಾರೆ. ಚುನಾವಣೆ ರಣರಂಗದಲ್ಲಿ ಭೇಟಿ ಮಾಡುವುದಾಗಿ ಕೆಲವರು ಹೇಳಿದ್ದಾರೆ ಅವರನ್ನು ರಣರಂಗದಲ್ಲಿ ಸ್ವಾಗತಿಸುತ್ತೇವೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

S T Somashekar Krishna Bhairegowda Congress MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ