ವಿಧಾನಸಭೆಯಲ್ಲಿ ಸ್ಥಾನಪಲ್ಲಟ..!

Karnataka Assembly session

29-07-2019

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷದವರ ಕುರ್ಚಿಗಳು ಸ್ಥಾನಪಲ್ಲಟವಾಗಿವೆ. ಕಳೆದ 14 ತಿಂಗಳಿನಿಂದ ಆಡಳಿತ ಪಕ್ಷದಲ್ಲಿದ್ದ ಕಾಂಗ್ರೆಸ್- ಜೆಡಿಎಸ್ ಸದಸ್ಯರು ಪ್ರತಿ ಪಕ್ಷದ ಸ್ಥಾನದಲ್ಲಿ ಕೂತಿದ್ದಾರೆ. ಈವರೆಗೂ ಪ್ರತಿಪಕ್ಷದ ಸ್ಥಾನದಲ್ಲಿದ್ದ ಬಿಜೆಪಿ ಸದಸ್ಯರು ಆಡಳಿತ ಪಕ್ಷದ ಕುರ್ಚಿಯಲ್ಲಿ ಕೂತಿದ್ದಾರೆ.
ಈ ವರೆಗೂ ಆಡಳಿತ ಪಕ್ಷದಲ್ಲಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮುಖಂಡರಾದ ದಿನೇಶ್‍ಗುಂಡೂರಾವ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್‍ಸೇರಿದಂತೆ ಮತ್ತಿತರ ನಾಯಕರು ವಿರೋಧ ಪಕ್ಷದ ಮೊದಲ ಸಾಲಿನಲ್ಲಿ ಕುಳಿತಿದ್ದಾರೆ.

ಹದಿನಾಲ್ಕು ತಿಂಗಳ ಕಾಲ ಪ್ರತಿಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ ಸಭಾನಾಯಕರಾಗಿ ಆಡಳಿತ ಪಕ್ಷದ ಸ್ಥಾನದಲ್ಲಿ ಕುಳಿತಿದ್ದು, ಅವರೊಂದಿಗೆ ಮೊದಲ ಸಾಲಿನಲ್ಲಿ ಮುಖಂಡರಾದ ಜಗದೀಶ್‍ಶೆಟ್ಟರ್, ಗೋವಿಂದಕಾರಜೋಳ, ಈಶ್ವರಪ್ಪ, ಶ್ರೀರಾಮುಲು ಅವರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Congress Session BJP Karnataka Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ