ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ಥರಿಂದ ಪ್ರತಿಭಟನೆ

Unnao Rape Survivor Critical

30-07-2019

ಲಖ್ನೋ: ಉನ್ನಾವೋ ಅತ್ಯಾಚಾರ ಸಂತ್ರಸ್ಥರ ಕುಟುಂಬಸ್ಥರು ಲಖ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿವಿ ಆವರಣದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕುಲದೀಪ್ ಸೆಂಗರ್ ಅವರಿಗೆ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ಥೆಯ ಸಂಬಂಧಿ ಮಹೇಶ್ ಸಿಂಗ್ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಎರಡು ದಿನಗಳ ಹಿಂದೆ ಸಂತ್ರಸ್ಥರನ್ನು ರಸ್ತೆ ಅಪಘಾತದಲ್ಲಿ ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕನನ್ನು ಬಂಧಿಸಲಾಗಿತ್ತು. ಜೊತೆಗೆ, ಅತ್ಯಾಚಾರದಲ್ಲಿ ಬಿಜೆಪಿ ನಾಯಕರ ಹೆಸರು ಕೂಡ ಕೇಳಿಬಂದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ಸಂತ್ರಸ್ಥರ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Unnao Murder Charges Rape Kuldeep Sengar


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ