ವಿ.ಜಿ.ಸಿದ್ಧಾರ್ಥ ಕಾಣೆ ಪ್ರಕರಣ: ಬಹಿರಂಗವಾದ ಪತ್ರದಲ್ಲೇನಿದೆ?

Coffee Day founder Siddharth missing in Mangalore

30-07-2019

ಬೆಂಗಳೂರು: ದಿಢೀರ್ ನಾಪತ್ತೆಯಾಗಿರುವ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ತಮ್ಮ ಕಂಪನಿಯ ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ಪತ್ರವನ್ನು ಬರೆದಿದ್ದಾರೆ. ನಾನು ಕಳೆದ 37 ವರ್ಷದಲ್ಲಿ ಕಠಿಣ ಪರಿಶ್ರಮದಿಂದ ಕೆಲಸ ಮಾಡಿದ್ದೇನೆ. ಕಾಫಿ ಡೇ ಮೂಲಕ 30 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಅಷ್ಟೇ ಅಲ್ಲದೆ ನನ್ನ ಐಟಿ ಕಂಪನಿ ಮೂಲಕ 20 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಆದರೆ ನನ್ನ ಪರಿಶ್ರಮದ ಹೊರತಾಗಿಯೂ ಆ ಎರಡೂ ಕಂಪನಿಗಳು ಲಾಭದಲ್ಲಿ ನಡೆಯಲಿಲ್ಲ. ನನಗೆ ಅನೇಕ ಕಡೆಯಿಂದ ಒತ್ತಡ ಹೆಚ್ಚಾಗಿದ್ದು, ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಬರೆದಿದ್ದಾರೆ.

ಕಂಪನಿಯಲ್ಲಿ ಶೇರ್ ಹೂಡಿದ್ದ ಖಾಸಗಿ ಪಾಟ್ನರ್ ಗಳು ತಮ್ಮ ಶೇರನ್ನು ವಾಪಸ್ ಕೊಡುವಂತೆ ಒತ್ತಾಯ ಹಾಕುತ್ತಿದ್ದಾರೆ. ಸ್ನೇಹಿತರೊಬ್ಬರ ಬಳಿ ನಾನು ದೊಡ್ಡ ಮಟ್ಟದಲ್ಲಿ ಸಾಲ ಮಾಡಿದ್ದೇನೆ. ಇತರೆ ಸಾಲಗಾರರ ಒತ್ತಡದಿಂದ ಇಂದು ನನಗೆ ಈ ಪರಿಸ್ಥಿತಿ ಬಂದಿದೆ. 6 ತಿಂಗಳ ಹಿಂದೆಯಷ್ಟೇ ಅಪಾರ ಪ್ರಮಾಣದಲ್ಲಿ ಸಾಲ ಪಡೆದಿದ್ದೇನೆ. ಸಾಲಗಾರರು ತುಂಬಾ ಕಿರುಕುಳ ಕೊಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

ಆದಾಯ ತೆರಿಗೆ ಇಲಾಖೆ ಅವರು ಕಿರುಕುಳ ನೀಡುತ್ತಿದ್ದಾರೆ. ಪತ್ರದಲ್ಲಿ ಈ ಹಿಂದಿನ ಐಟಿಯ ಡಿಜಿ ವಿರುದ್ಧ ನೇರವಾಗಿ ಆರೋಪ ಮಾಡಿದ್ದಾರೆ. ಎರಡು ಬಾರಿ ನನ್ನ ಕಂಪನಿಯ ಶೇರುಗಳನ್ನು ಜಪ್ತಿ ಮಾಡಿದ್ದರು. ಈ ಮೂಲಕ ಮೈಂಡ್ ಟ್ರೀ ಮಾರಾಟದ ಡೀಲ್‍ಗೆ ಅಡ್ಡಿಯಾದರು. ಅದಾದ ಬಳಿಕ ಕಾಫಿ ಡೇ ಶೇರಿಗೂ ಐಟಿ ಕಣ್ಣು ಹಾಕಿತ್ತು. ನನಗೆ ಖಾಸಗಿ ಕಂಪನಿ ಕಿರುಕುಳ ನೀಡುತ್ತಿದೆ‌ ಎಂದು ದೂರಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

VG Siddharth SM Krishna Coffee Day Mangalore


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ