ಠಾಣೆಗೆ ಬೆಂಕಿ ಹಚ್ಚುವಂತೆ ಹೇಳಿಕೆ ನೀಡಿದ್ದ ಶಕುಂತಲಾ ಖಾಟಿಕ್  ಉಲ್ಟಾ ಹೊಡೆದಿದ್ದಾರೆ !

Kannada News

12-06-2017

 

ನವದೆಹಲಿ:- ಠಾಣೆಯೊಂದಕ್ಕೆ ಬೆಂಕಿ ಹಚ್ಚುವಂತೆ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಶಾಸಕಿ ಶಕುಂತಲಾ ಖಾಟಿಕ್ ತಮ್ಮ ಮೇಲೆ ಬಂದಿದ್ದ ಆರೋಪವನ್ನ ಖಂಡಿಸಿದ್ದಾರೆ. ಮಹಿಳೆಯರ ಸುರಕ್ಷತೆಯ ಬಗೆಗೆ ಕ್ರಮ ಕೈಗೊಳ್ಳದೆ ಠಾಣೆಯಲ್ಲಿ ಸುಮ್ಮನೆ ಕೂತರೆ ಠಾಣೆಗೆ ಬೆಂಕಿ ಹಚ್ಚುವುದಾಗಿ ಹೇಳಿದ್ದೆ ಎಂದು ಉಲ್ಟಾ ಹೊಡೆದಿದ್ದಾರೆ. ಮಧ್ಯಪ್ರದೇಶ ಕಾಂಗ್ರೆಸ್ ಶಾಸಕಿಯಾಗಿರುವ  ಶಕುಂತಲಾ ಖಾಟಿಕ್ ರೈತರಿಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಠಾಣೆಯೊಂದಕ್ಕೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಸೂಚನೆ ನೀಡುತ್ತಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯರು ಹಾಗೂ ಕಾರ್ಯಕರ್ತರೊಂದಿಗೆ ಠಾಣೆಯೊಂದರ ಮುಂದೆ ಬಂದಿರುವ ಶಕುಂತಲಾ ಅವರು ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಈ ವೇಳೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪ್ರತಿಕೃತಿಗೆ ಬೆಂಕಿ ಹೆಚ್ಚಿದ್ದರು. ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಪೊಲೀಸರು ನೀರು ಹಾಕಿ ಬೆಂಕಿಯನ್ನು ಆರಿಸಿದ್ದರು. ಈ ವೇಳೆ ಶಕುಂತಲಾ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶಕುಂತಲಾ ಅವರು ತಮ್ಮ ಕಾರ್ಯಕರ್ತರಿಗೆ ಠಾಣೆಗೆ ಬೆಂಕಿ ಹಚ್ಚಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು. ಇದೀಗ ಈ ವಿಚಾರವಾಗಿ ಉಲ್ಟಾ ಹೊಡೆದಿದ್ದಾರೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ