ಸಿದ್ಧಾರ್ಥ ಸಾವಿಗೆ ಗಣ್ಯರ ಶ್ರದ್ಧಾಂಜಲಿ

Condolence to Siddharth

31-07-2019

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು #OmShanti ಹ್ಯಾಷ್‍ಟ್ಯಾಗ್‍ನಡಿ ಟ್ವೀಟ್ ಮಾಡಿದ್ದಾರೆ.
ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕೀಡಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ತಮ್ಮ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ ಅವರ ಅಗಲಿಕೆಯಿಂದ ಎಸ್.ಎಂ.ಕೃಷ್ಣ ಮತ್ತು ಕುಟುಂಬ ವರ್ಗ ಅನುಭವಿಸುತ್ತಿರುವ ನೋವು-ಸಂಕಟಗಳನ್ನು ನಾನು ಅರ್ಥಮಾಡಿಕೊಳಬಲ್ಲೆ. ಅವರ ಕುಟುಂಬಕ್ಕೆ ನನ್ನ‌ ಸಂತಾಪಗಳು ಎಂದು ಅವರು ಹೇಳಿದ್ದಾರೆ.
ವಿ.ಜಿ.ಸಿದ್ಧಾರ್ಥ ಅವರ ಸಾವು ನನ್ನನ್ನು ಒಳಗೊಂಡಂತೆ ಇಡೀ ದೇಶವನ್ನು ಅಲುಗಾಡಿಸಿದೆ ಎಂದು ರಾಜ್ಯಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್ ಕಂಬನಿ ಮಿಡಿದಿದ್ದಾರೆ. ಸಿದ್ಧಾರ್ಥ ಅವರ ಮೃತದೇಹ ಪತ್ತೆಯಾದ ನಂತರ ಟ್ವೀಟ್ ಮಾಡಿರುವ ಅವರು, ಲಕ್ಷಾಂತರ ಜನಕ್ಕೆ ಉದ್ಯೋಗ ನೀಡಿದ್ದ ಒಬ್ಬ ಉದ್ಯಮಿಯ ಜೀವನ ಹೀಗೆ ಕೊನೆಯಾಗಿದ್ದನ್ನು ನೋಡುವುದು ಅತ್ಯಂತ ದುಃಖ ತಂದಿದೆ. ಅವರ ಕುಟುಂಬ ಮತ್ತು ಹಿತೈಷಿಗಳಿಗೆ ನೋವನ್ನು ಭರಿಸುವ ಶಕ್ತಿ ಬರಲಿ ಎಂದು ಅವರು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

VG Siddharth BS yediyurappa Coffee Day Siddaramaiah


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ