ವೈದ್ಯರ ಮುಷ್ಕರ - ರೋಗಿಗಳ ಪರದಾಟ

Doctors strike

31-07-2019

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ವಿಧೇಯಕವನ್ನು ವಿರೋಧಿಸಿ ದೇಶಾದ್ಯಂತ ವೈದ್ಯರು ಮುಷ್ಕರ ಆರಂಭಿಸಿದ್ದಾರೆ. ಕೇಂದ್ರ ಸರ್ಕಾರದ ಎನ್‍ಎಂಸಿ ಬಿಲ್ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಷಿಯೇಷನ್(ಐಎಂಎ) ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ ನಿಡಿದ್ದು, ಸುಮಾರು 24 ಗಂಟೆಗಳ ಕಾಲ ಮುಷ್ಕರ ನಡೆಸಲಾಗುತ್ತಿದೆ.
ಮುಷ್ಕರದಿಂದಾಗು ಖಾಸಗಿ ಆಸ್ಪತ್ರೆಯ ಒಪಿಡಿ ಸೇವೆ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ ಆರು ಗಂಟೆಯಿಂದ ಗುರುವಾರ ಬೆಳಗ್ಗೆ ಆರು ಗಂಟೆಯವರೆಗೆ ಮುಷ್ಕರ ನಡೆಯಲಿದ್ದು, ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯವಾಗಿದೆ.
ರಾಜ್ಯದ್ಯಾಂತ ಸುಮಾರು 4500 ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಚರಿಸುತ್ತಿದ್ದರೆ, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳು ಸೇರಿ ಒಟ್ಟು 600 ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತಗೊಂಡಿದೆ.


ಸಂಬಂಧಿತ ಟ್ಯಾಗ್ಗಳು

Doctors Bengalore Protest OPD


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ