ಬಿಜೆಪಿ ಶಾಸಕ ಕುಲದೀಪ್ ವಿರುದ್ಧ ಸಿಬಿಐ ದೂರು

Unnao rape accused Kuldeep Singh Sengar

31-07-2019

ದೆಹಲಿ: ಉನ್ನಾವೋ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಅಮಾನತಾಗಿರುವ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಮತ್ತು ಇತರ 10 ಆರೋಪಿಗಳ ವಿರುದ್ಧ ಸಿಬಿಐ ದೂರು ದಾಖಲಿಸಿದೆ. ಜೊತೆಗೆ, ಇತರ 20 ಅನಾಮಿಕರ ವಿರುದ್ಧ ಕೂಡ ಕ್ರಿಮಿನಲ್ ಪಿತೂರಿ, ಕೊಲೆ, ಕೊಲೆಯತ್ನ ಮತ್ತು ಕ್ರಿಮಿನಲ್ ಬೆದರಿಕೆ ದೂರುಗಳನ್ನು ದಾಖಲಿಸಿದೆ.
ಈ ನಡುವೆ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಸುಪ್ರೀಂ ಕೋರ್ಟ್ ನೋಂದಣಿ ಕಚೇರಿಯಿಂದ ಒಂದು ವಾರದ ಒಳಗೆ ಉತ್ತರ ನೀಡುವಂತೆ ಸೂಚಿಸಿದ್ದು, ಜುಲೈ 12ರಂದು ಉನ್ನಾವೋ ಅತ್ಯಾಚಾರ ಸಂತ್ರಸ್ತರ ಕುಟುಂಬದವರು ಮನವಿಯನ್ನು ಸ್ವೀಕರಿಸಲು ತಡವಾಗಿದ್ದು ಏಕೆ? ಎಂದು ಪ್ರಶ್ನಿಸಿದೆ. ಈ ಕುರಿತು ವರದಿ ಸಲ್ಲಿಸುವಂತೆ ನೋಂದಣಿ ಕಚೇರಿಗೆ ನಿರ್ದೇಶನ ನೀಡಿದೆ.
ಮೂರು ದಿನಗಳ ಹಿಂದೆ ಉನ್ನಾವೋ ಅತ್ಯಾಚಾರ ಸಂತ್ರಸ್ಥರ ಕುಟುಂಬಸ್ಥರನ್ನು ರಸ್ತೆ ಅಪಘಾತದಲ್ಲಿ ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕನನ್ನು ಬಂಧಿಸಲಾಗಿತ್ತು.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಿನ್ನೆ ಉನ್ನಾವೋ ಅತ್ಯಾಚಾರ ಸಂತ್ರಸ್ಥರ ಕುಟುಂಬಸ್ಥರು ಲಖ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿವಿ ಆವರಣದ ಹೊರಗೆ ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಅವರಿಗೆ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ಥೆಯ ಸಂಬಂಧಿ ಮಹೇಶ್ ಸಿಂಗ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದರು.


ಸಂಬಂಧಿತ ಟ್ಯಾಗ್ಗಳು

Unnao Kuldeep Singh Sengar UP Rape


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ