ರಾಜ್ಯಾದ್ಯಂತ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ

Doctors strike

31-07-2019

ಬೆಂಗಳೂರು, ಜು. 31- ರಾಷ್ಟ್ರೀಯ ವೈದ್ಯಕೀಯ ಆಯೋಗ ಮಸೂದೆಯನ್ನು ವಿರೋಧಿಸಿ ವೈದ್ಯರು ನಡೆಸಿರುವ ಮುಷ್ಕರದಿಂದಾಗಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು.
ಖಾಸಗಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರೋಗಿಗಳು ಸರ್ಕಾರಿ ಆಸ್ಪತ್ರೆಗಳನ್ನೇ ನೆಚ್ಚಿಕೊಳ್ಳುವಂತಹ ಅನಿವಾರ್ಯ ಪರಿಸ್ಥಿತಿ ಎದುರಾಗಿ ರೋಗಿಗಳು ಪರದಾಡುವಂತಾಯಿತು
ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರಿಂದ ಹೊರರೋಗಿಗಳ ಚಿಕಿತ್ಸಾ ಘಟಕ (ಒಪಿಡಿ) ಮತ್ತು ಕ್ಲಿನಿಕ್‍ಗಳಲ್ಲಿ ಸೇವೆ ಸ್ಥಗಿತಗೊಂಡು  ಹೊರರೋಗಿಗಳು ಸಂಕಷ್ಟ ಎದುರಿಸಬೇಕಾಯಿತು..
ತುರ್ತು ಚಿಕಿತ್ಸಾ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸೇವೆಗಳು ಸ್ಥಗಿತಗೊಂಡಿದ್ದವು. ಇಂದು ಬೆಳಿಗ್ಗೆ 6 ಗಂಟೆಯಿಂದ ಆರಂಭವಾಗಿರುವ ಮುಷ್ಕರ ನಾಳೆ ಬೆಳಿಗ್ಗೆ 6ರವರೆಗೂ ನಡೆಯಲಿದ್ದು, ಖಾಸಗಿ ಆಸ್ಪತ್ರೆಗಳನ್ನು ನೆಚ್ಚಿಕೊಂಡಿದ್ದ ರೋಗಿಗಳು ಸರ್ಕಾರಿ ಆಸ್ಪತ್ರೆಗಳತ್ತ ಮುಖಮಾಡುವಂತಾಗಿತ್ತು.
ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಸರ್ಕಾರಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸುವಂತೆ, ಸರ್ಕಾರ ಸೂಚಿಸಿದೆ.
ಆಸ್ಪತ್ರೆಗಳತ್ತ ಬರುವ ರೋಗಿಗಳಿಗೆ ಎಲ್ಲಾ ರೀತಿಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಿಕೊಡುವಂತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯಸ್ಥರು ಸೂಚಿಸಿದ್ದಾರೆ.
ದೇಶಾದ್ಯಂತ ಕರೆನೀಡಿರುವ ಈ ಮುಷ್ಕರದಲ್ಲಿ ರಾಜ್ಯದಲ್ಲಿ ಭಾರತೀಯ ವೈದ್ಯಕೀಯ ಸಂಘಕ್ಕೆ ಸುಮಾರು 25 ಸಾವಿರ ವೈದ್ಯರು ಸದಸ್ಯರಾಗಿದ್ದು, ಅವರೆಲ್ಲರೂ ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಮುಷ್ಕರದ ಬಿಸಿ ಔಷಧದ ಅಂಗಡಿಗಳಿಗೆ ತಟ್ಟಿಲ್ಲ. ಎಂದಿನಂತೆ ಔಷಧಿ ಮಳಿಗೆಗಳು ತೆರೆದಿದ್ದು, ಎಲ್ಲಾ ರೀತಿಯ ಔಷಧಿಗಳು ಲಭ್ಯವಿರುವಂತೆ ಅಗತ್ಯಕ್ರಮ ಕೈಗೊಳ್ಳಲಾಗಿದೆ.
 


ಸಂಬಂಧಿತ ಟ್ಯಾಗ್ಗಳು

Doctors Bengalore Protest Medical


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ