ಮಹಿಳೆಯ ಬರ್ಬರ ಹತ್ಯೆ

Murder

31-07-2019

ಬೆಂಗಳೂರು, ಜು. 31-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ  ಮಹಿಳೆಯೊಬ್ಬರನ್ನು ಚಾಕುವಿನಿಂದ ಮನಸೋ ಇಚ್ಛೆ ಇರಿದು ತಲೆಮೇಲೆ ಕಲ್ಲು ಎತ್ತಿಹಾಕಿ, ಭೀಕರವಾಗಿ ಕೊಲೆ ಮಾಡಿದ್ದಾರೆ.
ಕೊಲೆಯಾದ ಮಹಿಳೆಯು ಸುಮಾರು 30 ವರ್ಷ ವಯಸ್ಸಿನವರಾಗಿದ್ದು, ಮೇಲ್ನೋಟಕ್ಕೆ ಉತ್ತರ ಭಾರತೀಯಳಂತೆ ಕಂಡುಬರುತ್ತಿದ್ದಾರೆ. ಸದ್ಯಕ್ಕೆ ಆಕೆಯ ಹೆಸರು, ವಿಳಾಸ ಪತ್ತೆಯಾಗಿಲ್ಲ ಎಂದು ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
ಮಹಿಳೆ ಕತ್ತು, ಹೊಟ್ಟೆ, ಕೈ, ಇನ್ನಿತರ ಭಾಗಗಳಿಗೆ ಮನಸೋ ಇಚ್ಛೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ನಂತರ, ಆಕೆಯ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ತಡರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಿಂಭಾಗದ ಗೇಟ್ ಬಳಿ ಇಂದು ಬೆಳಿಗ್ಗೆ 6ರ ವೇಳೆ ವಾಯುವಿಹಾರಕ್ಕೆ ಹೋದ ಸ್ಥಳೀಯರು, ಮೃತದೇಹವನ್ನು ಕಂಡು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. 


ಸಂಬಂಧಿತ ಟ್ಯಾಗ್ಗಳು

murder Police Arrest Airport


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ