ಬಿಜೆಪಿಯಿಂದ ಅತ್ಯಾಚಾರ ಆರೋಪಿ ಕುಲದೀಪ್ ಉಚ್ಛಾಟನೆ

BJP Dismissed MLA Kuldeep Sengar

01-08-2019

ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕಾರಿಗೆ ಲಾರಿ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಉಚ್ಛಾಟನೆಗೊಂಡಿದ್ದಾರೆ. ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಲದೀಪ್ ರನ್ನು ಬಿಜೆಪಿ ಉಚ್ಛಾಟನೆಗೊಳಿಸಿದೆ. 
ಇತ್ತೀಚಿಗೆ ಉನ್ನಾವೋ ಅತ್ಯಾಚಾರ ಸಂತ್ರಸ್ಥರ ಕುಟುಂಬಸ್ಥರು ಕುಲದೀಪ್ ಸೆಂಗರ್ ಅವರಿಗೆ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ಥೆಯ ಸಂಬಂಧಿ ಮಹೇಶ್ ಸಿಂಗ್ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಸಂತ್ರಸ್ಥರನ್ನು ರಸ್ತೆ ಅಪಘಾತದಲ್ಲಿ ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕನನ್ನು ಬಂಧಿಸಲಾಗಿತ್ತು. ಜೊತೆಗೆ, ಅತ್ಯಾಚಾರದಲ್ಲಿ ಬಿಜೆಪಿ ನಾಯಕರ ಹೆಸರು ಕೂಡ ಕೇಳಿಬಂದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕ ಕುಲದೀಪ್ ರನ್ನು ಉಚ್ಛಾಟನೆ ಮಾಡಿದೆ. 


ಸಂಬಂಧಿತ ಟ್ಯಾಗ್ಗಳು

Unnao Rape Kuldeep Sengar Accused


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ