ನವವಿವಾಹಿತೆಯ ಅನುಮಾನಾಸ್ಪದ ಸಾವು

Suicide?

01-08-2019

ಬೆಂಗಳೂರು: ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯು ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಆದರ್ಶನಗರದ ಪಲ್ಲವಿ (24)ಎಂದು ಗುರುತಿಸಲಾಗಿದೆ. ಬಂಗಾರಪೇಟೆಯ ಮೂಲದ ಪಲ್ಲವಿ ಒಂದೂವರೆ ತಿಂಗಳ ಹಿಂದೆಯಷ್ಟೇ ಖಾಸಗಿ ಕಂಪನಿಯ ಉದ್ಯೋಗಿ ನವೀನ್‍ನನ್ನು ಮದುವೆ ಆಗಿ ಆದರ್ಶನಗರದಲ್ಲಿ ಪತಿಯೊಂದಿಗೆ ವಾಸವಾಗಿದ್ದರು.
ಮನೆಯಲ್ಲಿ ಯಾರು ಇಲ್ಲದ ವೇಳೆ ಪಲ್ಲವಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಪಲ್ಲವಿಯ ಪೊೀಷಕರು ಗಂಡನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ನಾನು ಗಾರೆ ಕೆಲಸ ಮಾಡಿ ಆಕೆಯನ್ನು ಓದಿಸಿ ನವೀನ್‍ಗೆ ಮದುವೆ ಮಾಡಿಕೊಟ್ಟೆ. ಆದರೆ ಪತಿಯ ಮನೆಯವರು ಪಲ್ಲವಿಗೆ ಆಗಾಗ ಕಿರುಕುಳ ನೀಡುತ್ತಿದ್ದರು. ನನ್ನ ಮಗಳು ಮೊಬೈಲ್ ಕೂಡ ಬಳಸುತ್ತಿರಲಿಲ್ಲ. ನಾನು ಕೊಡಿಸುತ್ತೇನೆ ಎಂದರು ಆಕೆ ಬೇಡ ಎಂದು ಹೇಳುತ್ತಿದ್ದಳು. ಹಣಕ್ಕಾಗಿ ನನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ. ನಾನೇ ಒಂದು ಬಾರಿ ಅವರಿಗೆ ಹಣ ನೀಡಿದ್ದೇನೆ  ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪಲ್ಲವಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಪತಿ ನವೀನ್‍ನನ್ನು ವಶಕ್ಕೆ ತೆಗೆದುಕೊಂಡಿರುವ ಕೋಣನಕುಂಟೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Suicide Bangalore Murder Hanging


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ