ಆ.5 ರಿಂದ ನೋ ಹೆಲ್ಮೆಟ್, ನೋ ಪೆಟ್ರೋಲ್

No Helmet No Petrol

02-08-2019

ಬೆಂಗಳೂರು: ನಗರದಲ್ಲಿನ ಪೆಟ್ರೋಲ್‍ಬಂಕ್‍ಗಳಲ್ಲಿ ಇದೇ ಆ.5 ರಿಂದ ನೋ ಹೆಲ್ಮೆಟ್, ನೋ ಪೆಟ್ರೋಲ್ ಹೆಲ್ಮೆಟ್ ಧರಿಸಿದ್ದರೆ ಮಾತ್ರ ಪೆಟ್ರೋಲ್ ಎಂಬ ಹೊಸ ನಿಯಮ ಜಾರಿಗೆ ಬರಲಿದೆ. ಈಗಾಗಲೇ ಕೇರಳ, ಆಂಧ್ರ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಈ ನಿಯಮ ಜಾರಿಯಾಗಿದೆ. ಇದರ ಪ್ರಕಾರ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಬೇಕಾಗಿರುವುದು ಕಡ್ಡಾಯವಾಗಲಿದೆ.
ನಗರದ ಪೆಟ್ರೋಲ್ ಬಂಕ್ ಮಾಲೀಕರ ಸಭೆ ನಡೆಸಿದ ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ಹರಿಶೇಖರನ್ ಅವರು ಆ.5ರಿಂದ ನೋ ಹೆಲ್ಮೆಟ್, ನೋ ಪೆಟ್ರೋಲ್ ನಿಯಮವನ್ನು ಜಾರಿಗೊಳಿಸುವಂತೆ ಸೂಚಿಸಿದ್ದು ಅದಕ್ಕೆ ಎಲ್ಲರೂ ಸಮ್ಮತಿಸಿದ್ದಾರೆ.
ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ. ಬೆಂಗಳೂರಲ್ಲಿ ಬೈಕ್ ಅಪಘಾತದಿಂದ ಹೆಚ್ಚುತ್ತಿರುವ ಸಾವು-ನೋವು ತಡೆಗೆ ಈ ಹೊಸ ನಿಯಮವನ್ನು ತರಲಾಗುತ್ತಿದೆ. ಕಳೆದ ವರ್ಷ ಬೈಕ್ ಅಪಘಾತಗಳಲ್ಲಿ ಸುಮಾರು 150 ಮಂದಿ ದುರ್ಮರಣಕ್ಕೀಡಾಗಿದ್ದರು. ದಂಡ ವಿಧಿಸುತ್ತಿದರೂ ಹೆಲ್ಮೆಟ್ ಬಳಸದೇ ವಾಹನ ಚಲಾಯಿಸುವವರ ಸಂಖ್ಯೆ ಕಡಿಮೆಯಾಗದಿದ್ದರಿಂದ, ಈ ನೂತನ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.
 


ಸಂಬಂಧಿತ ಟ್ಯಾಗ್ಗಳು

Petrol Law Helmet Traffic rules


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ