‘ಮಗುವನ್ನು ದತ್ತು ತೆಗೆದುಕೊಂಡಿದ್ದು ಬದುಕನ್ನೇ ಬದಲಿಸಿದೆ’

Sushmita Sen statement

03-08-2019

ವಿಶ್ವಸುಂದರಿಯಾಗಿ ಸಾಧನೆ ಮಾಡಿದ್ದರಿಂದ ಹಿಡಿದು.. ಇಬ್ಬರು ಮಕ್ಕಳನ್ನು ದತ್ತು ತೆಗೆದುಕೊಂಡು ತಾಯಿ ಎನಿಸಿಕೊಂಡಿರುವ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಬಹಳಷ್ಟು ಜನರಿಗೆ ಮಾದರಿಯಾಗಿದ್ದಾರೆ. ಇಬ್ಬರು ಮಕ್ಕಳನ್ನು ಸಾಕಿ ಸಲಹುತ್ತಿರುವ ಸುಶ್ಮಿತಾ ತಾಯ್ತನದ ಬಗ್ಗೆ ಮಾತನಾಡಿದ್ದು, ಇಬ್ಬರು ಮಕ್ಕಳನ್ನು ದತ್ತು ತೆಗೆದುಕೊಂಡಿರುವುದು ನನ್ನ ಜೀವನವನ್ನೇ ಬದಲಿಸಿದೆ ಎಂದಿದ್ದಾರೆ. ಅಲ್ಲದೇ ಒಂದು ಬಾರಿಯಲ್ಲ.. ಎರಡು ಬಾರಿ ತಾಯಾಗುವ ಭಾಗ್ಯ ಪಡೆದಿರುವುದಾಗಿ ಅವರು ಹೇಳಿದ್ದಾರೆ. 43 ವರ್ಷದ ಬಾಲಿವುಡ್ ನಟಿ ಸುಶ್ಮಿತಾ, ಮಕ್ಕಳನ್ನು ದತ್ತು ತೆಗೆದುಕೊಂಡಿದ್ದು ತಮ್ಮ ಜೀವನದಲ್ಲಿ ತೆಗೆದುಕೊಂಡ ಅತ್ಯಂತ ಬುದ್ಧಿವಂತ ನಿರ್ಧಾರ ಎಂದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Sushmita Sen Actor Bollywood Adopt


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ