ಶಾಸಕರ ಅನರ್ಹತೆ ಅನೈತಿಕವಾದದ್ದು: ಕೆ.ಸುಧಾಕರ್

K Sudhakar statement

03-08-2019

ಬೆಂಗಳೂರು: ರಮೇಶ್ ಕುಮಾರ್ ಅವರಂತಹ ನಾಯಕರಿಂದ ಸಂವಿಧಾನಕ್ಕೆ ಅಪಚಾರ ಆಗುತ್ತಿದೆ. ಮೌಲ್ಯಗಳ ಪ್ರತಿಪಾದಕರಂತೆ ರಮೇಶ್ ಕುಮಾರ್ ನಟಿಸುತ್ತಾರೆ. ಶಾಸಕರನ್ನು ಅನರ್ಹಗೊಳಿಸಿದ ಅವರ ಆದೇಶ ಅನೈತಿಕವಾದದ್ದು ಎಂದು ಅನರ್ಹ ಶಾಸಕ ಕೆ.ಸುಧಾಕರ್ ಹೇಳಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದೇವೆ. ಸುಪ್ರೀಂಕೋರ್ಟ್ ತೀರ್ಪು ನಿಧಾನವಾದರೂ ಪರವಾಗಿಲ್ಲ, ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ, ಸುಮಾರು ಅರ್ಧ ಗಂಟೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್ ಅವರು, ಸಿ.ಎಂ.ಯಡಿಯೂರಪ್ಪನವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಹಾಗಾಗಿ ಈಗ ಅವರ ಮನೆಗೆ ಬಂದು ಅಭಿನಂದನೆ ಸಲ್ಲಿಸಿದ್ದೇನೆ. ರಾಜಕೀಯವಾಗಿ ಯಾವುದೇ ಚರ್ಚೆಯಾಗಿಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಅಷ್ಟೇ ಎಂದರು
ನಮ್ಮ ಜಿಲ್ಲೆಗೆ ಮೆಡಿಕಲ್ ಕಾಲೇಜ್ ಮಂಜೂರಾಗಿದೆ. ಆದರೆ ಹಿಂದನ ಸರ್ಕಾರ ಅನುದಾನ ನೀಡಲಿಲ್ಲ. ಇದನ್ನು ಸಿಎಂ ಗಮನಕ್ಕೆ ತಂದಿದ್ದೇನೆ. ಅವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಮುಂದಿನ ವಾರದಲ್ಲಿ ಅನುದಾನ ನೀಡಬಹುದು ಎಂದು ತಿಳಿಸಿದರು.
ನಮ್ಮ ಪಕ್ಷದಲ್ಲಿನ ರಾಜಕೀಯ ಧೋರಣೆಯಿಂದ ಮನನೊಂದಿದ್ದೇನೆ. ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

K Sudhakar Rebel MLA Congress JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ