ಪಕ್ಷ ಸಂಘಟನೆಯತ್ತ ದೇವೇಗೌಡರ ಚಿತ್ತ

H D Devegowda

03-08-2019

ಬೆಂಗಳೂರು: ಆಗಸ್ಟ್ 7ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸಮಾವೇಶಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಬಹಿರಂಗ ಆಹ್ವಾನ ನೀಡಿದ್ದಾರೆ.

ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಜೆಡಿಎಸ್ ಪಕ್ಷವನ್ನು ಕಟ್ಟೇ ಕಟ್ಟುತ್ತೇವೆ ಎಂಬ ಹಠ ತೊಟ್ಟಿರುವ ಕಾರ್ಯಕರ್ತರೊಂದಿಗೆ ಸಮಾಲೋಚಿಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ತಯಾರಿಸುವ ಉದ್ದೇಶದಿಂದ ಅರಮನೆ ಮೈದಾನದಲ್ಲಿ ನಿಷ್ಠಾವಂತ ಕಾರ್ಯಕರ್ತರ ಸಮಾವೇಶ ನಡೆಸಲಾಗುತ್ತಿದೆ.

ರಾಜ್ಯದ ಜನರಿಗೆ ಪ್ರಾದೇಶಿಕ ಪಕ್ಷವೊಂದರ ಅನಿವಾರ್ಯತೆ ಅಥವಾ ಅಗತ್ಯ ಇಂದಲ್ಲ ನಾಳೆ ಅರಿವಾಗುತ್ತದೆ ಎಂಬ ವಿಶ್ವಾಸ ನಮ್ಮದು. ಅದಕ್ಕಾಗಿ ಜೆಡಿಎಸ್ ಪಕ್ಷವನ್ನು ಉಳಿಸಿ ಬೆಳೆಸಬೇಕು. ಹಿಂದೇ ಆಗಿರುವ ತಪ್ಪುಗಳನ್ನು ತಿದ್ದುಕೊಂಡು ಹೊಸ ಹೆಜ್ಜೆ ಇಡಬೇಕೆಂದು ಬಹಿರಂಗ ಆಹ್ವಾನ ಪತ್ರದಲ್ಲಿ ಗೌಡರು ತಿಳಿಸಿದ್ದಾರೆ.

ಲೋಕಸಭಾ ಸದಸ್ಯರ, ರಾಜ್ಯಸಭಾ ಸದಸ್ಯರು, ಮಾಜಿ ಸಚಿವರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಂಸದರು, 2018ರ ವಿಧಾನಸಭೆ ಹಾಗೂ 2019ರ ಲೋಕಸಭೆ ಚುನಾವಣೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಜಿಲ್ಲಾ ಹಾಗೂ ರಾಜ್ಯಮಟ್ಟದ ಪಕ್ಷದ ಪದಾಧಿಕಾರಿಗಳು ಸೇರಿದಂತೆ ನಿಷ್ಠಾವಂತ ಕಾರ್ಯಕರ್ತರಿಗೆ ಆಹ್ವಾನ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H D Devegowda HD Kumaraswamy JDS HD Revanna


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ