ಕಾಶ್ಮೀರದಲ್ಲಿ ಸೂಕ್ಷ್ಮ ಪರಿಸ್ಥಿತಿ: ಪ್ರಧಾನಿ ಮೋದಿ ಸಭೆ

Cabinet Meeting

05-08-2019

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಚಿವ ಸಂಪುಟದ ಸದಸ್ಯರೊಂದಿಗೆ ಇಂದು ಭೇಟಿ ಮಾಡಿ ಚರ್ಚೆ ನಡೆಸಿದರು. ಜಮ್ಮು ಕಾಶ್ಮೀರದ ಪರಿಸ್ಥಿತಿ ಕುರಿತು ವಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆ ಹಾಗೂ ಹೊರಗೆ ನಡೆಸುತ್ತಿರುವ ವಾಗ್ದಾಳಿಗಳ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಿ ಚರ್ಚಿಸಿದರು. ಇಂದು ಲೋಕಸಭೆ ಮತ್ತು ರಾಜ್ಯ ಸಭೆ ಕಲಾಪವನ್ನು ಮುಂದೂಡಿ, ಜಮ್ಮು ಕಾಶ್ಮೀರದ ಪರಿಸ್ಥಿತಿ ಕುರಿತು ಚರ್ಚಿಸಬೇಕೆಂದು ಕಾಂಗ್ರೆಸ್, ಪಿಡಿಪಿ, ಎಐಎಂಐಎಂ ಸೇರಿದಂತೆ ಪ್ರಮುಖ ವಿಪಕ್ಷಗಳು ಈಗಾಗಲೇ ನೊಟೀಸ್ ನೀಡಿವೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಲಾಯಿತು.

ನಿನ್ನೆ ತಡರಾತ್ರಿ ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿಡಲಾಗಿದೆ. ಕಾಶ್ಮೀರದಲ್ಲಿ ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಉದ್ಭವವಾಗಿದ್ದು, ಕಾಶ್ಮೀರದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಇನ್ನು ಜಮ್ಮುಕಾಶ್ಮೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಬಹುತೇಕ ರಾಜ್ಯದಾದ್ಯಂತ ಹೆಚ್ಚಿನ ಭದ್ರತಾಪಡೆ, ಪೊಲೀಸ್ ಮತ್ತು ಸೇನೆಯನ್ನು ನಿಯೋಜಿಸಲಾಗಿದೆ.

ಇಂದಿನ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಸಚಿವರು ಹಾಜರಿದ್ದರು.


ಸಂಬಂಧಿತ ಟ್ಯಾಗ್ಗಳು

PM Modi Cabinet Meet Kashmir Nirmala Sitaraman


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ