ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ 370, 35ಎ ರದ್ದು

Article 370 has been canceled

05-08-2019

ದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370 ಮತ್ತು 35ಎ ಅನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಘೋಷಿಸಿದರು. ಇಂದು ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳ ತೀವ್ರ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರವನ್ನು ನೀಡುವ ಸಂವಿಧಾನದ ಕಲಂ 370 ಮತ್ತು 35ಎ ಅನ್ನುರದ್ದುಗೊಳಿಸುವ ತಿದ್ದುಪಡಿ ವಿಧೇಯಕವನ್ನು ಅಮಿತ್ ಶಾ ಮಂಡಿಸಿದರು.

ಮಸೂದೆ ಮಂಡಿಸುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಸೇರಿದಂತೆ ವಿಪಕ್ಷ ನಾಯಕರು ತಿದ್ದುಪಡಿ ವಿಧೇಯಕದ ವಿರುದ್ಧ ವಾಗ್ದಳಿ ನಡೆಸಿದರು. ಕಡೆಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಮಾಧಾನಪಡಿಸುವ ಯತ್ನವೂ ವಿಫಲವಾಯಿತು.

ಕಳೆದ ಒಂದು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ಬೆಳವಣಿಗೆಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀ ಮಟ್ಟದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದವು. ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪ್ರಮುಖ ನಿರ್ಣಯವೊಂದನ್ನು ತೆಗೆದುಕೊಂಡಂತಾಗಿದೆ.


ಸಂಬಂಧಿತ ಟ್ಯಾಗ್ಗಳು

Jammu Amit Shah Kashmir PM Modi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Riskiest decisions in independent India • Creation of Bangladesh • Pokhran nuclear tests • Full integration of Kashmir
  • Anonymous
  • Professional