ಮಸಾಜ್ ಸೆಂಟರ್‍ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪಿ ಬಂಧನ !

Kannada News

12-06-2017

ಬೆಂಗಳೂರು:- ಮಸಾಜ್ ಸೆಂಟರ್‍ ನಲ್ಲಿ ಲೈಂಗಿಕ ಚಟುವಟಿಕೆ ಮತ್ತು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದಂಧೆಯಲ್ಲಿ ತೊಡಗಿದ್ದ ಮೂವರು ಹೊರರಾಜ್ಯದ ಯುವತಿಯರನ್ನು ರಕ್ಷಿಸಿದ್ದಾರೆ. ಟಿ.ಸಿ ಪಾಳ್ಯದ ರಾಮ್‍ ಬಾಬು(29)ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ 10,700 ರೂ ನಗದು, 1 ಮೊಬೈಲ್, ಒಂದು ಸ್ವೈಪಿಂಗ್ ಮೆಷಿನ್ ವಶಪಡಿಸಿಕೊಂಡು ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಯು ಹೆಚ್‍ಎಸ್‍ಆರ್ ಲೇಔಟ್‍ನ ಎರಡನೇ ಹಂತದ ಪರಂಗಿಪಾಳ್ಯದ ಮನೆಯೊಂದರಲ್ಲಿ ಸ್ಪಾ ನಡೆಸಲು ಪರವಾನಗಿ ಪಡೆದು ಬಾಡಿಟು ಬಾಡಿ ಮಸಾಜ್, ಹ್ಯಾಪಿ ಎಂಡಿಂಗ್  ಇನ್ನಿತರ ಮಸಾಜ್‍ಗಳ ಮೂಲಕ ಲೈಂಗಿಕ ಚಟುವಟಿಕೆ ಮತ್ತು ವೇಶ್ಯಾವಾಟಿಕೆ ನಡೆಸುತ್ತಿದ್ದ, ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಶಕ್ಕೆ ಪಡೆದಿರುವ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ