ಸಂಪುಟ ವಿಸ್ತರಣೆ : ಯಡಿಯೂರಪ್ಪ, ಸಂತೋಷ್ ಹಗ್ಗಜಗ್ಗಾಟ

BS Yediyurappa and BL Santosh

06-08-2019

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿ ವಾರ ಕಳೆದರೂ ಸಂಪುಟ ವಿಸ್ತರಣೆಯಾಗಿಲ್ಲ. ಈ ಬಗ್ಗೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಸಂಪುಟ ವಿಸ್ತರಣೆ ಗೆ ಹೈಕಮಾಂಡ್ ಅಸ್ತು ಎಂದಿದೆ.

ಇದರ ಬೆನ್ನಲ್ಲೇ ಸಂಪುಟ ಸೇರಲಿರುವ ಸಂಭಾವ್ಯರ ಪಟ್ಟಿ ಸಿದ್ದ ಪಡಿಸಲಾಗುತ್ತಿದೆ. ಎಲ್ಲವೂ ಸರಿಯಾದಲ್ಲಿ ಸಚಿವ ಸಂಪುಟ ಆಗಸ್ಟ್ 9 ರಂದು ವಿಸ್ತರಣೆಯಾಗಲಿದೆ. ಆದರೆ ಸದ್ಯದ ಮಾಹಿತಿ ಗಳ ಪ್ರಕಾರ ಇದು ಅಷ್ಟು ಸುಲಭವಲ್ಲ ಎನ್ನಲಾಗಿದೆ. ಇದಕ್ಕೆ ಕಾರಣವಿಷ್ಟೆ, ಸಚಿವರ ಆಯ್ಕೆ ವಿಷಯದಲ್ಲಿ ಯಡಿಯೂರಪ್ಪ ಮತ್ತು ಪಕ್ಷದ ಸಂಘಟನಾ ಕಾರ್ಯದರ್ಶಿ ಸಂತೋಷ್ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಆರಂಭವಾಗಿದೆ.

ಇಬ್ಬರೂ ನಾಯಕರು ತಮ್ಮ ಆಪ್ತರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲು ‌ಕಸರತ್ತು ನಡೆಸಿದ್ದಾರೆ ಪ್ರತ್ಯೇಕ ಪಟ್ಟಿ ಸಿದ್ದಪಡಿಸಿಟ್ಟುಕೊಂಡಿದ್ದು ಇದಕ್ಕೆ ಅನುಮತಿ ಪಡೆದುಕೊಳ್ಳಲು ಪ್ರಯತ್ನ ನಡೆಸಿದ್ದಾರೆ ಹೀಗಾಗಿ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಹೈಕಮಾಂಡ್ ಗೆ ಯಡಿಯೂರಪ್ಪ ಸಲ್ಲಿಸಿರುವ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್.ಅಶೋಕ್, ಶ್ರೀರಾಮುಲು, ಈಶ್ವರಪ್ಪ, ವಿ.ಸೋಮಣ್ಣ, ಅಶ್ವಥ್ ನಾರಾಯಣಗೌಡ, ಅರವಿಂದ್ ಲಿಂಬಾವಳಿ, ನಾಗೇಶ್, ಪೂರ್ಣಿಮಾ ಶ್ರೀನಿವಾಸ್, ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಎಸ್.ಎ.ರಾಮದಾಸ್,ಬಾಲಚಂದ್ರಜಾರಕಿಹೊಳಿ, ಶಿವನಗೌಡ ನಾಯಕ್, ಎನ್.ರವಿಕುಮಾರ್, ಸುರೇಶ್‍ಕುಮಾರ್, ಕೆ.ಜಿ.ಬೋಪಯ್ಯ, ಸಿ.ಟಿ.ರವಿ, ಎಂ.ಪಿ.ಕುಮಾರಸ್ವಾಮಿ ಅವರ ಹೆಸರುಗಳಿವೆ.

ಬಿಎಲ್ ಸಂತೋಷ್ ಸಲ್ಲಿಸಿರುವ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್.ಅಶೋಕ್, ಶ್ರೀರಾಮುಲು, ಈಶ್ವರಪ್ಪ, ವಿ.ಸೋಮಣ್ಣ,1 ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್, ನಾಗೇಶ್, ಶಶಿಕಲಾ ಜೊಲ್ಲೆ, ಮಾಧುಸ್ವಾಮಿ, ಉಮೇಶ್ ಕತ್ತಿ, ಕೋಟಾ ಶ್ರೀನಿವಾಸ್ ಪೂಜಾರಿ, ಅಂಗಾರ, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಎಸ್.ಎ.ರಾಮದಾಸ್, ಬಾಲಚಂದ್ರ ಜಾರಕಿಹೊಳಿ, ಸಿ.ಟಿ.ರವಿ, ಎಸ್.ಎ.ರವೀಂದ್ರನಾಥ್, ಸಿ.ಎಂ.ಉದಾಸಿ,

ಎಂ.ಪಿ.ಕುಮಾರಸ್ವಾಮಿ, ತಿಪ್ಪಾರೆಡ್ಡಿ, ಅಪ್ಪಚ್ಚು ರಂಜನ್‌ ಅವರ ಹೆಸರುಗಳಿವೆ. ಇದರ ನಡುವೆ ಇನ್ನೂ ಕೆಲವರು ತಮ್ಮ ಆಪ್ತ ನಾಯಕರ ಮೂಲಕ ಸಂಪುಟ ಸೇರಲು ಲಾಭಿ ಆರಂಭಿಸಿದ್ದಾರೆ. ಇವರಿಗೆಲ್ಲಾ ಸಚಿವ ಸ್ಥಾನವನ್ನು ಯಾರಿಗೆ ಕೊಡಬೇಕು, ಯಾರಿಗೆ ಕೊಡಬಾರದು ಎನ್ನುವ ನಿರ್ಧಾರ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಅಮಿತ್ ಶಾ ಅವರು, ಮಂತ್ರಿಗಿರಿ ಲಾಬಿ ಮಾಡುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಜಿಲ್ಲಾವಾರು ಶಾಸಕರ ರಿಪೋರ್ಟ್ ಗಳನ್ನು ತರಿಸಿಕೊಂಡಿದ್ದಾರೆ. ಈ ಮೂಲಕ ಯಡಿಯೂರಪ್ಪನವರ ಕೈಯಲ್ಲಿರುವ ಎರಡು ಪಟ್ಟಿಗಳನ್ನು ತಾಳೆ ಮಾಡಿ ಫೈನಲ್ ಲಿಸ್ಟ್ ಸಿದ್ಧಗೊಳಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B L Santosh BS Yediyurappa BJP Cabinet


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ