ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ

Karnataka disrupted due to heavy rain

07-08-2019

ರಾಜ್ಯದಲ್ಲಿ ಮುಂಗಾರು ವೈಭವ ತೀವ್ರಗೊಂಡಿದೆ. ಅದರಲ್ಲೂ ಮಲೆನಾಡು ಮತ್ತು ಉತ್ತರ ಕರ್ನಾಟಕದಲ್ಲಿ ರೌದ್ರ ನರ್ತನವನ್ನೇ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ದಿನಗಳ ಕಾಲ, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಿದೆ ಎಂದು ಮುನ್ಸೂಚನೆ ನೀಡಿದ್ದು, ಮೇಘಸ್ಫೋಟದ ಮುನ್ನೆಚ್ಚರಿಕೆಯನ್ನು ಕೂಡ ರವಾನಿಸಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಾದ್ಯಂತ ನಾಳೆಯೂ ಶಾಲಾ-ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Flood Coastal belt Heavy rain Weather Report


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ