ಪ್ರವಾಹ- ನೆರವಿನ ಭರವಸೆ ನೀಡಿದ ರಾಜನಾಥ್ ಸಿಂಗ್

Flood in karnataka

08-08-2019

ಬೆಂಗಳೂರು: ರಾಜ್ಯದ ಉತ್ತರ ಭಾಗ ಬಾರಿ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಹೋಗಿದೆ. ಕೃಷ್ಣಾ, ಭೀಮಾ ಜಲಾನಯನ ಪ್ರದೇಶದ ಜನ, ಜಾನುವಾರು ಸೂಕ್ತ ನೆರವಿಗಾಗಿ ಮೊರೆಯಿಡುತ್ತಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪಗೆ ದೂರವಾಣಿ ಕರೆ ಮಾಡಿದ ಕೇಂದ್ರ ರಕ್ಷಣಾ ‌ಸಚಿವ ರಾಜನಾಥ್ ಸಿಂಗ್, ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಪ್ರವಾಹ ಪರಿಸ್ಥಿತಿ ನಿರ್ವಹಣೆ ಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಪರಿಹಾರ ಕಾರ್ಯಕ್ಕಾಗಿ ಸೇನಾ ಹೆಲಿಕಾಪ್ಟರ್ ಹಾಗೂ ಅಗತ್ಯ ಕೇಂದ್ರ ರಕ್ಷಣಾ ತಂಡಗಳನ್ನು ರಾಜ್ಯಕ್ಕೆ ಇಂದು ಸಂಜೆಯೊಳಗೆ ಕಳುಹಿಸುವುದಾಗಿ ಭರವಸೆ ನೀಡಿದರು.
ಸೇನೆಯ ಹತ್ತು ಹೆಲಿಕಾಪ್ಟರ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಗೆ ಕಳುಹಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ ಅವರು ಪ್ರವಾಹ ಪರಿಸ್ಥಿತಿ ಕಡಿಮೆಯಾಗುತ್ತಿದ್ದಂತೆ ಪರಿಸ್ಥಿತಿ ಅವಲೋಕನ ಮಾಡಲು ಹಿರಿಯ ‌ಅಧಿಕಾರಿಗಳ ತಂಡ ಕಳುಹಿಸುವ ಭರವಸೆ ನೀಡಿದರು.


ಸಂಬಂಧಿತ ಟ್ಯಾಗ್ಗಳು

Flood BS Yediyurappa Heavy Rain Rajnath Singh


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ