ಕಬಿನಿ ಜಲಾನಯನ ಪ್ರದೇಶಲ್ಲಿ ಹೈ ಅಲರ್ಟ್

Kabini Dam

08-08-2019

ಬೆಂಗಳೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜಲಾಶಯದ ಒಳಹರಿವು 60,000 ಕ್ಯೂಸೆಕ್ ಗೆ ಹೆಚ್ಚಳವಾಗಿದೆ ಜಲಾಶಯದಿಂದ ನದಿಗೆ ಬಿಡುತ್ತಿರುವ ಹೊರಹರಿವಿನ ಪ್ರಮಾಣ 60,000 ಕ್ಯೂಸೆಕ್ ಗೆ ಹೆಚ್ಚಳ ಮಾಡಲಾಗಿದೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಂ.ಜಿ ಶಂಕರ್ ಅವರು ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಕಪಿಲಾನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳತ್ತ ತೆರಳುವಂತೆ ಸೂಚನೆ ನೀಡಲಾಗಿದೆ.
ಕಬಿನಿ ಜಲಾಶಯದ ನೀರಿನ ಮಟ್ಟ 82 ಅಡಿಗಳಿಗೆ ಏರಿಕೆಯಾಗಿದೆ.
ಕೇರಳದ ವಯನಾಡು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಹೆಚ್ಚು ಮಳೆ ಬೀಳುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಇಂದು ಬೆಳಗ್ಗೆ ಕಬಿನಿ ಜಲಾಶಯದಿಂದ 60 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಿರಂತರ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ, ವಯನಾಡು ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಕಬಿನಿ ಯೋಜನೆ ಇಂಜಿನಿಯರ್‍ಗಳೊಂದಿಗೆ ಸತತ ಸಂಪರ್ಕದಲ್ಲಿದೆ.

ಇದುವರೆಗೂ ಈ ಪ್ರದೇಶದಲ್ಲಿ ಯಾವುದೇ ರೀತಿಯ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿಲ್ಲ. ಜನ ಜಾನುವಾರುಗಳಿಗೂ ತೊಂದರೆಯಾಗಿಲ್ಲ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡು ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Flood Kabini Dam Mansoon Heavy Rain


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ