ಸಂಪುಟ ವಿಸ್ತರಣೆ ಮುಂದೂಡಿಕೆ: ಆಕಾಂಕ್ಷಿಗಳಲ್ಲಿ ನಿರಾಸೆ

BS Yediyurappa Cabinet

08-08-2019

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದೆ. ಈ ದಿಢೀರ್ ಬೆಳವಣಿಗೆಯಿಂದಾಗಿ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳಿಗೆ ನಿರಾಸೆ ಉಂಟಾಗಿದೆ. ಶುಕ್ರವಾರ ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆಯನ್ನು ಮುಂದಿನ ವಾರಕ್ಕೆ ಮುಂದೂಡಲ್ಪಟ್ಟಿದೆ.
ರಾಜ್ಯದಲ್ಲಿ ಪ್ರವಾಹ ಉಂಟಾಗಿರುವುದರಿಂದ ಪರಿಹಾರ ಕಾರ್ಯ ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚಿಸಿರುವ ವರಿಷ್ಠರು ಪರಿಸ್ಥಿತಿ ತಿಳಿಯಾದ ನಂತರ ದೆಹಲಿಗೆ ಬರುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಸಿಎಂ ಪ್ರವಾಹ ಪೀಡಿತ ಪ್ರದೇಶದಲ್ಲಿ ಅವಲೋಕನದಲ್ಲಿ ತೊಡಗಿದ್ದಾರೆ.
ಮುಂದಿನ ವಾರ ಮತ್ತೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಅಗತ್ಯತೆಯನ್ನು ವರಿಷ್ಠರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ಬಳಿಕವಷ್ಟೇ ಇದು ಅಂತಿಮವಾಗಲಿದೆ. ಅಲ್ಲಿಯವರೆಗೂ ಆಕಾಂಕ್ಷಿಗಳಿಗೆ ತಳಮಳ ತಪ್ಪಿದ್ದಲ್ಲ.


ಸಂಬಂಧಿತ ಟ್ಯಾಗ್ಗಳು

BS Yediyurappa Karnataka CM cabinet BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ