ರಾಜ್ಯದಲ್ಲಿ ಪೋನ್ ಟ್ಯಾಪಿಂಗ್ ನಡೆದಿತ್ತಾ?

Telephone tapping

14-08-2019

ಬೆಂಗಳೂರು: ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪೋನ್ ಕದ್ದಾಲಿಕೆ ನಡೆದಿದೆ, ಬಂಡಾಯ ಶಾಸಕರೆಲ್ಲರ ಪೋನ್ ಟ್ಯಾಪ್ ಮಾಡಲಾಗಿತ್ತು. ಅದನ್ನು ಮುಂದಿಟ್ಟುಕೊಂಡು ನಮ್ಮನ್ನು ಬ್ಲಾಕ್ಮೇಲ್ ಮಾಡಲಾಗುತ್ತಿತ್ತು. ಇದನ್ನು ನೇರವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿಸಿದ್ದರು ಎಂದು ಹಿರಿಯ ನಾಯಕ ಎಚ್ ವಿಶ್ವನಾಥ್ ಆಪಾದಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಪ್ರಕರಣ ನಮ್ಮ ಖಾಸಗಿತನಕ್ಕೆ ಧಕ್ಕೆ ತರುವ ಕೆಲಸವಾಗಿದೆ. ಕಾನೂನಿನ ಪ್ರಕಾರ ನನ್ನ ಪತ್ನಿಯ ದೂರವಾಣಿ ಸಹ ಕದ್ದಾಲಿಕೆ ಮಾಡುವಂತಿಲ್ಲ. ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ‌ ಬಳಿಕ ನಮ್ಮನ್ನು ಬ್ಲಾಕ್ ಮೇಲ್ ಮಾಡಲು ಪೋನ್ ಟ್ಯಾಪಿಂಗ್ ಬಳಸಿಕೊಳ್ಳಲಾಗಿತ್ತು. ಇದರ ಬಗ್ಗೆ ಸಮಗ್ರ ತನಿಖೆಯಾಗಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಜರುಗಿಸಬೇಕಿದೆ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ದೂರವಾಣಿ ಕದ್ದಾಲಿಕೆ ದೊಡ್ಡ ಮಟ್ಟದಲ್ಲಿ ನಡೆದಿದೆ. ಸಿದ್ದರಾಮಯ್ಯ ಅವರ ಪಿಎ ವೆಂಕಟೇಶ್ ಎಂಬವರ ಫೋನ್ ಕದ್ದಾಲಿಕೆ ಮಾಡಲಾಗಿದೆ. ರೆಬೆಲ್ ಶಾಸಕರ ದೂರವಾಣಿ ಕದ್ದಾಲಿಕೆ ಮಾಡಲಾಗಿದೆ. ಹೀಗೆ ಕದ್ದಾಲಿಕೆ ಮಾಡಿ ರೆಬೆಲ್ ಶಾಸಕರನ್ನು ಕುಮಾರಸ್ವಾಮಿ ಕಚೇರಿಯಿಂದ ಬ್ಲಾಕ್ ಮೇಲ್ ಮಾಡಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದವನ ದೂರವಾಣಿಯನ್ನು ಜೆಡಿಎಸ್ ಮುಖ್ಯಮಂತ್ರಿಯೇ ಕದ್ದಾಲಿಕೆ ಮಾಡಿದ್ದಾರೆ. ನಮ್ಮ ಮೇಲೆ ನಿಮಗೆ ವಿಶ್ವಾಸ ಇರಲಿಲ್ಲವೇ ಎಂದು ವಿಶ್ವನಾಥ್ ಪ್ರಶ್ನೆ ಮಾಡಿದರು.
ಜೆಡಿಎಸ್ ರಾಜ್ಯಾಧ್ಯಕ್ಷನಾಗಿ ಶಾಸಕನಾಗಿದ್ದರೂ ನನ್ನ ಮೇಲೆ ಅವರಿಗೆ ನಂಬಿಕೆ ಇರಲಿಲ್ಲ. ನಾನು ನನ್ನ ಕುಟುಂಬದವರ ಜತೆ ಮಾತನಾಡುವುದನ್ನು ಕದ್ದಾಲಿಕೆ ಮಾಡುವುದು ಎಷ್ಟು ಸರಿ ಅಂದು ಸಿಎಂ ಆಗಿದ್ದ ಕುಮಾರಸ್ವಾಮಿ ಒಂದು ರೀತಿಯ ಚಕ್ರವ್ಯೂಹದಲ್ಲಿ ಸಿಕ್ಕಿ ಹಾಕಿಕೊಂಡು ನರಳುವಂತಾಗಿತ್ತು. ಇದೀಗ ಸಿಎಂ ಯಡಿಯೂರಪ್ಪ ಅವರ ಪರಿಸ್ಥಿತಿಯೂ ಭಿನ್ನವಲ್ಲ
ಈ ರಾಜ್ಯದಲ್ಲಿ ಜೆಡಿಎಸ್ ಗೆ ಕುಮಾರಸ್ವಾಮಿ ಹೇಗೆ ಅನಿವಾರ್ಯವೋ ಹಾಗೆಯೇ ಬಿಎಸ್ವೈ ರಾಜ್ಯ ಬಿಜೆಪಿಗೆ ಅನಿವಾರ್ಯ. ಇದನ್ನು ಬಿಜೆಪಿ ಹೈಕಮಾಂಡ್ ಮನವರಿಕೆ ಮಾಡಿಕೊಂಡರೆ ಸದ್ಯ ಒಳಿತು ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

H Vishwanath BJP Telephone Tapping BS Yediyurappa


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ