ನೀಟ್ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ !

Kannada News

12-06-2017

 ನವದೆಹಲಿ: ನೀಟ್ ಫಲಿತಾಂಶಗಳನ್ನ ಪ್ರಕಟಿಸುವಂತೆ ಸಿ.ಬಿ.ಎಸ್.ಇ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ. ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ(ನೀಟ್‌) ಫಲಿತಾಂಶ ಪ್ರಕಟಿಸದಂತೆ ಮದ್ರಾಸ್‌ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ)  ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಅಶೋಕ್‌ ಭೂಷಣ್‌ ಮತ್ತು ದೀಪಕ್‌ ಗುಪ್ತಾ ಅವರನ್ನು ಒಳಗೊಂಡ ರಜಾ ಕಾಲದ ಪೀಠ ಈ ಬಗೆಗೆ  ವಿಚಾರಣೆ ನಡೆಸಿ ಸಿ.ಬಿ.ಎಸ್.ಇ ಗೆ  ಫಲಿತಾಂಶಗಳನ್ನ ಪ್ರಕಟಿಸುವಂತೆ ಸೂಚನೆಯನ್ನ ನೀಡಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ