ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್....!

BS Yediyurappa

14-08-2019

ಬೆಂಗಳೂರು: ಕಡೆಗೂ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕ್ಯಾಬಿನೆಟ್‍ಗೆ ಬಿಜೆಪಿ ವರಿಷ್ಠರು ಮಿತಿ ಹಾಕಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಬಿಎಸ್ ಯಡಿಯೂರಪ್ಪ ಅವರಿಗೆ ಕರೆ ಮಾಡಿ, ಆಗಸ್ಟ್ 19ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಜೊತೆಗೆ ಸಂಪುಟ ರಚನೆಗೆ ಮುನ್ನ ಆಗಸ್ಟ್ 16 ರಂದು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ .
ಇದರ ಬೆನ್ನಲ್ಲೇ ಸಂಪುಟ ಸೇರಲಿರುವ ಸಂಭಾವ್ಯರ ಪಟ್ಟಿ ಸಿದ್ಧ ಪಡಿಸಲಾಗುತ್ತಿದೆ. ಎಲ್ಲವೂ ಸರಿಯಾದಲ್ಲಿ ಸಚಿವ ಸಂಪುಟ ಆಗಸ್ಟ್ 19 ರಂದು ವಿಸ್ತರಣೆಯಾಗಲಿದೆ.

ಮೊದಲ ಹಂತದಲ್ಲಿ ಶಾಸಕರಾದ ಬಿ.ಶ್ರೀರಾಮುಲು, ಮಾಧುಸ್ವಾಮಿ, ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ, ಅಶ್ವತ್ಥನಾರಾಯಣ, ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ ಹಾಗೂ ಪಕ್ಷೇತರ ಶಾಸಕ ನಾಗೇಶ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.

ಈ ಮೂಲಕ ಪ್ರದೇಶವಾರು ಹಂಚಿಕೆ ಒಂದು ಹಂತ ಪೂರೈಸಿ, ಸಚಿವರನ್ನು ಪ್ರವಾಹ ಪರಿಸ್ಥಿತಿ ಅವಲೋಕನ, ನೆರೆ ಸಂತ್ರಸ್ತರ ನೆರವಿಗೆ ಧಾವಿಸುವಂತೆ ಮುಖ್ಯಮಂತ್ರಿ ಸೂಚಿಸಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

BS Yediyurappa BJP cabinet Amitha Shah


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ