ಇನ್ನೂ ಎರಡು ಮೂರು ದಿನ ಬಾರಿ ಮಳೆ !

Heavy Rain

17-08-2019

ಬೆಂಗಳೂರು: ಇತ್ತೀಚೆಗಷ್ಟೇ ಭಾರೀ ಮಳೆ ಬಿದ್ದು ಭೂ ಕುಸಿತ ಹಾಗೂ ಪ್ರವಾಹ ಉಂಟಾಗಿದ್ದ ಕೊಡಗು ಹಾಗೂ ಕರಾವಳಿ ಭಾಗದಲ್ಲಿ ಇನ್ನು ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನಲ್ಲೂ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಈಗಲೂ ಮುಂದುವರೆದಿದೆ. ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಚದುರಿದಂತೆ ಸಾಧಾರಣ ಮಳೆಯಾಗಿದೆ. ಇಂದು ಕೊಡಗಿನಲ್ಲಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. ಹಾಗೆಯೇ ಕರಾವಳಿ ಭಾಗದಲ್ಲಿ ಎರಡು ಮೂರು ದಿನಗಳ ಕಾಲ ಹೆಚ್ಚಿನ ಮಳೆ ಬೀಳುವ ಸಂಭವವಿದೆ.

ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದರೂ ಸಾಧಾರಣ ಮಳೆ ಮುಂದುವರೆಯಲಿದೆ. ಒಂದರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಇನ್ನೆರಡು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ಸ್ಥಳೀಯ ಹವಾ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.


ಸಂಬಂಧಿತ ಟ್ಯಾಗ್ಗಳು

Heavy rain Weather Mansoon Kodagu


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ