ರಾಜ್ಯದ ಸಿಎಂಗೆ ರಾಮಲಿಂಗಾರೆಡ್ಡಿ ಆಗ್ರಹವೇನು?

Ramalingareddy Statement

20-08-2019

ಬೆಂಗಳೂರು: ನಗರದಲ್ಲಿ ಕೈಗೊಂಡಿರುವ ವೈಟ್ ಟಾಪಿಂಗ್, ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದ್ದರೆ, ಕೂಡಲೇ ತನಿಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ನಡೆಯುತ್ತಿರುವ ವೈಟ್ ಟಾಪಿಂಗ್ ಅನ್ನು ಸ್ಥಗಿತಗೊಳಿಸಲಿ. ಆ ಮೊತ್ತವನ್ನು ಆ ಕ್ಷೇತ್ರಗಳಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಮಾಡಲಿ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಎರಡು ಕಾಮಗಾರಿಗಳನ್ನು ರದ್ದುಪಡಿಸಿ, ಯೋಜನೆಗಳ ಹಣವನ್ನು ಬಿಜೆಪಿ ಪಕ್ಷದ ಶಾಸಕರ ಕ್ಷೇತ್ರಗಳಿಗೆ ನೀಡುವುದು ತಪ್ಪು ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ನಾನು ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ. ಅವರನ್ನು ಭೇಟಿ ಮಾಡಿದ್ದಾಗ ಅಭಿವೃದ್ಧಿ ಕಾಮಗಾರಿಯನ್ನು ಮುಂದುವರಿಸಿಕೊಂಡು ಹೋಗುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ ಬೆಂಗಳೂರು ನಗರಕ್ಕೆ 4 ಮಂತ್ರಿಗಳು ಆಯ್ಕೆಯಾಗಿದ್ದಾರೆ. ಅವರು ನಗರದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಿ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಪಕ್ಷದಲ್ಲೇ ಹೆಚ್ಚು ಗೊಂದಲವಿದೆ. ಮಂತ್ರಿ ಸ್ಥಾನ ಸಿಗದೇ ಅಸಮಾಧಾನ ಗೊಂಡಿರುವ ಕೆಲ ಶಾಸಕರ ವಿಚಾರ ಅವರ ಪಕ್ಷದ ಆಂತರಿಕ ವಿಚಾರ ಎಂದು ಉತ್ತರಿಸಿದರು.


ಸಂಬಂಧಿತ ಟ್ಯಾಗ್ಗಳು

Ramalingareddy Congress BS Yediyurappa BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ