ಸಿದ್ದರಾಮಯ್ಯ ಕನಸಿಗೆ ಕಲ್ಲು ಹಾಕಲು ಪ್ಲಾನ್!

Siddaramaih and Yediyurappa

21-08-2019

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಪಕ್ಷ ನಾಯಕನ ಕನಸಿಗೆ ಕಲ್ಲು ಹಾಕಲು ದೊಡ್ಡದಾದ ಯೋಜನೆ ಸಿದ್ದಗೊಂಡಿದೆ ಸಿದ್ದರಾಮಯ್ಯ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡವರೆಲ್ಲಾ ಒಟ್ಟಾಗಿ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಅನ್ನೋ ಸಿಟ್ಟಲ್ಲಿರುವ ಹೈಕಮಾಂಡ್‍ಗೆ ಈಗ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ಸಲ್ಲಿಸಿದ್ದು, ಸಿದ್ದರಾಮಯ್ಯ ಅವರ ಕನಸಿಗೆ ಧಕ್ಕೆ ಬಂದಂತಾಗಿದೆ. ಮೊದಲಿಂದಲೂ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ.

ಸಮ್ಮಿಶ್ರ ಸರ್ಕಾರದ ಪತನದ ನಂತರ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಸ್ನೇಹ ಇನ್ನೂ ಗಟ್ಟಿಯಾಗಿದ್ದು, ಸಿದ್ದರಾಮಯ್ಯ ಯಡಿಯೂರಪ್ಪ ಸ್ನೇಹದ ಫಲವಾಗಿಯೇ ಫೋನ್ ಟ್ಯಾಪಿಂಗ್ ಪ್ರಕರಣ ಸಿಬಿಐ ಅಂಗಳಕ್ಕೆ ಹೋಗಿದೆ. ಕಾಂಗ್ರೆಸ್ ಸರ್ಕಾರ ಹಾಗೂ ಸಮ್ಮಿಶ್ರ ಸರ್ಕಾರದ ಅವಧಿಯ ಕೆಲವು ಯೋಜನೆ ಕೈ ಬಿಡಲು ಯಡಿಯೂರಪ್ಪ ಮುಂದಾಗಿದ್ದರು.

ಆದರೆ ಸಿದ್ದರಾಮಯ್ಯ ಒತ್ತಾಯಿಸುತ್ತಿದ್ದಂತೆ ಅರ್ಧಗಂಟೆಯಲ್ಲೇ ಅನ್ನಭಾಗ್ಯ ಹಾಗೂ ಇಂದಿರ ಕ್ಯಾಂಟಿನ್ ನಂತಹ ಯೋಜನೆ ಕೈ ಬಿಡಲ್ಲ ಎಂದು ಯಡಿಯೂರಪ್ಪ ಪ್ರಕಟಿಸುತ್ತಾರೆ. ಹೀಗಾಗಿ ಮುಂದೆಯೂ ಇವರಿಬ್ಬರೂ ಹೊಂದಾಣಿಕೆ ಮಾಡಿಕೊಂಡು ರಾಜಕಾರಣ ಮಾಡುತ್ತಾರೆ. ಹೀಗಾಗಿ ಅವರಿಗೆ ಪ್ರತಿಪಕ್ಷ ನಾಯಕನಂತಹ ಉನ್ನತ ಹುದ್ದೆಗೆ ನೇಮಿಸಬಾರದು ಎಂದು ಆಗ್ರಹಿಸಿದ್ದಾರೆ ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Siddaramaiah Congress BJP JDS


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ