ರದ್ದಾಗಿರುವ ಮೈಸೂರು ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ಉಪ ಚುನಾವಣೆ !

Kannada News

13-06-2017

ಮೈಸೂರು:- ಜೋಡಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾದ ಪರಿಣಾಮ, ಮೈಸೂರು ಮಹಾನಗರ ಪಾಲಿಕೆ 32ನೇ ವಾರ್ಡ್ ನ ಸದಸ್ಯ ಸಿ.ಮಾದೇಶ್ ಸದಸ್ಯತ್ವ ರದ್ದಾಗಿರುವ ಹಿನ್ನೆಲೆ. ತೆರವಾಗಿರುವ ಸ್ಥಾನಕ್ಕೆ ಬರುವ ಜುಲೈ 2 ಕ್ಕೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಣೆಯಾಗಿದೆ. ಜೆಡಿಎಸ್ ನಿಂದ ಎರಡು ಬಾರಿ ಪಾಲಿಕೆ ಸದಸ್ಯನಾಗಿ ಆಯ್ಕಾಯಾಗಿದ್ದ ಸಿ.ಮಾದೇಶ್ ಸದಸ್ಯತ್ವ ಕಳೆದುಕೊಂಡಿದ್ದಾರೆ. ಮತ್ತು ಹುಣಸೂರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೆ ಗುರಿಯಾಗಿ ಜೈಲು ವಾಸದಲ್ಲಿದ್ದಾರೆ. 2016 ರ ಫೆಬ್ರವರಿಯಲ್ಲಿ ಸಿ. ಮಾದೇಶ್  ಹಾಗೂ ಈತನ 7 ಮಂದಿ ಸಹಚರರಿಗೆ ಮೈಸೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಸಿ.ಮಾದೇಶ್ ಜೈಲುಪಾಲಾದ 16 ತಿಂಗಳ ಬಳಿಕ ಉಪ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜೂನ್ 14 ರಿಂದ ನಾಮಪತ್ರ ಸಲ್ಲಿಕೆ ಆರಂಭ. ಜೂನ್ 21 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 22 ನಾಮಪತ್ರಗಳ ಪರಿಶೀಲನೆ. ನಾಮಪತ್ರ ಹಿಂಪಡೆಯಲು ಜೂನ್ 24 ಕಡೆಯ ದಿನ. ಜುಲೈ 2ರಂದು ಮತದಾನ ನಡೆಯಲಿದ್ದು. ಜುಲೈ 5ರಂದು ಮತಗಳ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಮಹಾನಗರ ಪಾಲಿಕೆ ಅವಧಿ ಕೇವಲ ಒಂದು ವರ್ಷ ಮೂರು ತಿಂಗಳು ಬಾಕಿ ಇರುವಾಗ ಚುನಾವಣೆ ಘೋಷಣೆ ಆಗಿರುವುದರಿಂದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಮಹಾನಗರ ಪಾಲಿಕೆ ಉಪ ಚುನಾವಣೆ ಎದುರಾಗಿರುವುದರಿಂದ ಮೂರು ಪಕ್ಷಗಳಿಗೆ ಪ್ರತಿಷ್ಠೆಯಾಗಿ ಪರಿಣಮಿಸಿರುವ ಚುನಾವಣಾ ಕಣ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ