‘ಹಾಲು ಕುಡಿದವರು ಬದುಕೋಲ್ಲಾ, ವಿಷ ಕುಡಿದವರು ಬದುಕುತ್ತಾರಾ?’

Siddaramaiah Statement

26-08-2019

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ‌ಸರ್ಕಾರ ಬಹಳ ದಿನ ಇರುತ್ತೆ ಎಂದು ಯಾರಿಗೂ ನಂಬಿಕೆ ಇಲ್ಲ. ರೆಬಲ್ಸ್ ಗಳನ್ನಿಟ್ಟುಕೊಂಡು ಸರ್ಕಾರ ಮುನ್ನೆಡೆಸೋಕ್ಕಾಗುತ್ತಾ. ಹಾಲು ಕುಡಿದ ಮಕ್ಕಳೆ ಬದುಕಲ್ಲ. ಇನ್ನು ವಿಷ ಕುಡಿದವರು ಬದಕ್ತಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ನೆರೆಪಿಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ ದೆಹಲಿ ಟು ಬೆಂಗಳೂರು ಮಧ್ಯೆ ಟೂರ್ ಮಾಡುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ನೆರೆ ಹಾನಿಯಾದರೂ ಕೇಂದ್ರದಿಂದ ಸೂಕ್ತ ಪರಿಹಾರ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿದರು.
ಸಮ್ಮಿಶ್ರ ಸರ್ಕಾರ ‌ಪತನ ಆರೋಪದ ಬಗ್ಗೆ ನಾನು ಸುದೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಬೈರತಿ ಬಸವರಾಜು ಮತ್ತು ಸೋಮಶೇಖರ್‍ ರನ್ನು ನಾನು ಮುಂಬೈಗೆ ಕಳುಸಿದ್ದೇನೆ ಎಂದು ಅವರು ಹೇಳುತ್ತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯರನ್ನು ಯಾರು ಕಳುಹಿಸಿದ್ದು, ಅವರು ಜೆಡಿಎಸ್‍ನವರು ಅಲ್ಲವೆ. ಹೆಚ್‍ಡಿಕೆ ಮತ್ತು ಹೆಚ್‍ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.


ಸಂಬಂಧಿತ ಟ್ಯಾಗ್ಗಳು

BS Yediyurappa congress Siddaramaiah Flood


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ