ಅತಂತ್ರ ಸ್ಥಿತಿಯಲ್ಲಿ ಅತೃಪ್ತರು..!

Rebel MLA

26-08-2019

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್‍ನ 13, ಜೆಡಿಎಸ್‍ನ 3 ಮತ್ತು ಒಬ್ಬ ಪಕ್ಷೇತರ ಶಾಸಕ ಇದೀಗ ಅತಂತ್ರಕ್ಕೆ ಸಿಲುಕಿದ್ದಾರೆ. ಅನರ್ಹ ಶಾಸಕರ ಪ್ರಕರಣವನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿರುವುದರಿಂದ 17 ಮಂದಿ ಕಾಂಗ್ರೆಸ್-ಜೆಡಿಎಸ್‍ನ ಬಂಡಾಯಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ವಿರುದ್ಧ ಬಂಡಾಯ ಸಾರಿ ಶಾಸಕ‌ ಸ್ಥಾನಕ್ಕೆ ಅವರು ನೀಡಿದ್ದ ರಾಜೀನಾಮೆ ಅಂಗೀಕರಿಸದ ಅಂದಿನ ಸಭಾದ್ಯಕ್ಷ ರಮೇಶ್ ಕುಮಾರ್ 17 ಮಂದಿ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಿದ್ದರು.

ರಮೇಶ್‍ಕುಮಾರ್ ಅವರ ತೀರ್ಪಿನ ಅನುಸಾರ 15ನೇ ವಿಧಾನಸಭೆ ಅವಧಿ ಅಂದರೆ 2023ರವರೆಗೆ ಈ 17 ಮಂದಿ ಶಾಸಕರು ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸುವಂತಿಲ್ಲ. ಸಚಿವ ಸ್ಥಾನ, ನಿಗಮ ಮಂಡಳಿ ಸೇರಿದಂತೆ ಯಾವುದೇ ಪ್ರಮುಖ ಸ್ಥಾನ ಮಾನಗಳನ್ನು ಅಲಂಕರಿಸುವಂತಿಲ್ಲ.

ಹೀಗಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗುವ ಹಾಗೂ ವಿವಿಧ ಹುದ್ದೆಗಳನ್ನು ಅಲಂಕರಿಸುವ ಕನಸು ಕಾಣುತ್ತಿದ್ದ 17 ಮಂದಿಗೆ ಭಾರೀ ನಿರಾಸೆಯಾಗಿತ್ತು. ಕೂಡಲೇ ಸುಪ್ರೀಂಕೋರ್ಟ್‍ನ ಮೆಟ್ಟಿಲೇರಿದ್ದರು. ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇದರಿಂದ ಬಂಡಾಯಗಾರರು ಬೀದಿಗೆ ಬಿದ್ದಂತಾಗಿದೆ.


ಸಂಬಂಧಿತ ಟ್ಯಾಗ್ಗಳು

Supreme Court Rebel MLA Ramesh Kumar Election


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ