ಯಡಿಯೂರಪ್ಪ ಬಗ್ಗೆ ಸಿದ್ದರಾಮಯ್ಯ ನುಡಿದ ಭವಿಷ್ಯವೇನು ಗೊತ್ತ?

Siddaramaiah Statement

27-08-2019

ಜಮಖಂಡಿ : ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಬಿ.ಎಸ್. ಯಡಿಯೂರಪ್ಪ ಎಷ್ಟು ದಿವಸ ಮುಖ್ಯಮಂತ್ರಿಯಾಗಿರುತ್ತಾರೆ ಎಂಬುದನ್ನು ಹೇಳಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಮಖಂಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಬಿಜೆಪಿ ಹೈಕಮಾಂಡ್‍ಗೆ ಇಷ್ಟವಿರಲಿಲ್ಲ. ಆದರೆ ಯಡಿಯೂರಪ್ಪ ಪಕ್ಷದ ವರಿಷ್ಠರನ್ನು ಗೋಗರೆದು ಮುಖ್ಯಮಂತ್ರಿ ಪದವಿ ಪಡೆದಿದ್ದಾರೆ. ಅವರನ್ನು ಕಟ್ಟಿಹಾಕಲು ಮೂವರನ್ನು ಉಪಮುಖ್ಯಮಂತ್ರಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಹುದ್ದೆ ಸಂವಿಧಾನಾತ್ಮಕವಲ್ಲ. ಅವರಿಗೆ ವಿಶೇಷ ಅಧಿಕಾರವೂ ಇರುವುದಿಲ್ಲ ಎಂದಿದ್ದಾರೆ.

ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡುವುದು ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಇಷ್ಟವಿರಲಿಲ್ಲ. ಆದರೂ ಅವರನ್ನು ಮೂಲೆಗುಂಪು ಮಾಡಲು ವರಿಷ್ಠರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿದ್ದಾರೆ. ಅವರುಗಳ ಸ್ವಯಂಕೃತ ಅಪರಾಧದಿಂದಲೇ ಪತನವಾಗಬಹುದು. ನಾವು ಹಸ್ತಕ್ಷೇಪ ಮಾಡುವುದಿಲ್ಲ. ಬಿಜೆಪಿಯಲ್ಲಿ ಹಿರಿಯರಿಗೆ ಬೆಲೆ ಇಲ್ಲದಂತಾಗಿದೆ. ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ್ ಅವರು ಈ ಹಿಂದೆ ಉಪಮುಖ್ಯಮಂತ್ರಿಗಳಾಗಿದ್ದವರು. ಜಗದೀಶ್ ಶೆಟ್ಟರ್ ಅವರೂ ಸಹ ಮುಖ್ಯಮಂತ್ರಿಯಾಗಿದ್ದವರು. ಅವರುಗಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡದೇ ಅಪಮಾನ ಮಾಡಲಾಗಿದೆ. ಸರ್ಕಾರ ತಾನಾಗಿಯೇ ಬೀಳಬಹುದು ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Siddaramaiah BS Yadiyurappa Congress Cabinet


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ